Home Uncategorized ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ ʼಸಮಾಜವಾದʼ ಮತ್ತು ʼಜಾತ್ಯತೀತʼ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ: ಸಿ...

ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ ʼಸಮಾಜವಾದʼ ಮತ್ತು ʼಜಾತ್ಯತೀತʼ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ: ಸಿ ಎಂ ಸಿದ್ದರಾಮಯ್ಯ

0

ಮೈಸೂರು ಜು 18: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು.

ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ದವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ತಮಗಿದೆ ಎಂದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ. ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ ಎಂದರು.

ಮಂಡಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಕಮಂಡಲವಾದಿಗಳು ಮತ್ತು ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು ಎಂದರು.

ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ರಾಜೀವ್ ಗಾಂಧಿ ಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ನೆನಪಿಡಬೇಕು ಎಂದರು.

You cannot copy content of this page

Exit mobile version