Saturday, April 19, 2025

ಸತ್ಯ | ನ್ಯಾಯ |ಧರ್ಮ

ಹೈಕೋರ್ಟ್ ಕೇಸ್‌ಗಳ ಬಗ್ಗೆ ಅಸಡ್ಡೆ ಏಕೆ? ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಕೃಷ್ಣ ಬೈರೇಗೌಡ

ಹಾಸನ: ಹಾಸನ‌ ಜಿಲ್ಲೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ 1272 ಪ್ರಕರಣಗಳಿವೆ. ಈ ಪೈಕಿ ಶೇ.70 ರಷ್ಟು ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ಅಲ್ಲದೆ, ನ್ಯಾಯಾಲಯದಲ್ಲಿ ವಕಾಲತ್ತನ್ನೂ ಸಹ ಸಲ್ಲಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಹಾಸನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಹಾಸನ ಜಿಲ್ಲೆಯಿಂದ ಅಧಿಕ ಸಂಖ್ಯೆಯ ಪ್ರಕರಣಗಳು ಹೈಕೋರ್ಟ್ ನಲ್ಲಿವೆ. ಆದರೆ, ತಹಶಿಲ್ದಾರರು ಹಾಗೂ ಎಸಿಗಳು ಈ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ.‌ಪರಿಣಾ‌ಮ ಹೈಕೋರ್ಟ್ ಕಂದಾಯ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ ಎಂದು ಸಚಿವರು ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಅಸಮಾಧಾನ ಹೊರಹಾಕಿದರು.

ಅಲ್ಲದೆ, ಈ ಬಗ್ಗೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಸಚಿವರು, “ನೀವು ಮಾಡುವ ಕೆಲಸಕ್ಕೆ ಸರ್ಕಾರದ ಜಮೀನು ಖಾಸಗಿಯವರ ಪಾಲಾಗಲು ನಾವು ಸಹಿ ಹಾಕಬೇಕ? ಎಂದು ಕಿಡಿಕಾರಿದರು. ಮುಂದುವರೆದು, ತಹಶಿಲ್ದಾರರು ಈಗಲಾದರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು, ಹೈಕೋರ್ಟ್ ನಲ್ಲಿರುವ ಎಲ್ಲಾ ಪ್ರಕರಣಗಳಲ್ಲೂ ವಕಾಲತ್ತು ಸಲ್ಲಿಸಬೇಕು, ಮೂರು ತಿಂಗಳಲ್ಲಿ ಪ್ರಗತಿ ಕಾಣದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page