Home ರಾಜ್ಯ ಚಿಕ್ಕಮಗಳೂರು ಕಾಡಾನೆ ಸಮಸ್ಯೆ, ತೋಟಕ್ಕೆ ಕಾರ್ಮಿಕರನ್ನು ಕಳಿಸಿದರೆ ಕೇಸ್ – ಈಶ್ವರ್‌ ಖಂಡ್ರೆ

ಕಾಡಾನೆ ಸಮಸ್ಯೆ, ತೋಟಕ್ಕೆ ಕಾರ್ಮಿಕರನ್ನು ಕಳಿಸಿದರೆ ಕೇಸ್ – ಈಶ್ವರ್‌ ಖಂಡ್ರೆ

0

ಚಿಕ್ಕಮಗಳೂರು: ಬೇಸಿಗೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುವ ಹಿನ್ನೆಲೆಯಲ್ಲಿ ನಿಗಾ ಇಡುವಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವ‌ರ್ ಖಂಡ್ರೆ ಸೂಚನೆ ನೀಡಿ, ಚಿಕ್ಕಮಗಳೂರು ಜಿಲ್ಲೆ ಹುಣಸೆಹಳ್ಳಿ ತೋಟಕ್ಕೆ ಕಾರ್ಮಿಕರನ್ನು ಕಳುಹಿಸಿದ ಜಮೀನು ಮಾಲಿಕರ ವಿರುದ್ಧ ದೂರು ದಾಖಲಿಸುವಂತೆಯೂ ಕಟ್ಟಪ್ಪಣೆ ಮಾಡಿದರು.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ತುರ್ತು ವಿಡಿಯೋ ಸಂವಾದ ನಡೆಸಿದರು. ಚಿಕ್ಕಮಗಳೂರಿನಲ್ಲಿ ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ, ಆನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಕ್ಕೆ ಹೋಗದಂತೆ ಮಾಹಿತಿ ನೀಡಲಾಗಿದ್ದರೂ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಚಿವರು ಇದಕ್ಕೆ ಪ್ರತಿಕ್ರಿಯಿಸಿದ್ದು, ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ತೋಟಕ್ಕೆ ಕಳುಹಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಿ, ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಿ ಎಂದು ತಿಳಿಸಿದರು.

You cannot copy content of this page

Exit mobile version