Home ಬೆಂಗಳೂರು ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು, ಆಗಸ್ಟ್ 15: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣ ನವರ ಬದುಕು ನಮಗೆಲ್ಲರಿಗೂ ಸ್ಪೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

You cannot copy content of this page

Exit mobile version