ದೆಹಲಿ: ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಹಳೆಯ ಕ್ಷೇತ್ರವಾದ ಹೊಸದೆಹಲಿಯಿಂದ ಮತ್ತೆ ಸ್ಪರ್ಧಿಸುವುದಾಗಿ ಶುಕ್ರವಾರ ಸ್ಪಷ್ಟಪಡಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ ಸ್ಥಾನದಲ್ಲಿ ಈ ಬಾರಿ ಮಾಜಿ ಸಿಎಂ ಪುತ್ರರು ಹಾಗೂ ಜನ ಸಾಮಾನ್ಯರ ನಡುವೆಯೇ ಪೈಪೋಟಿ ಏರ್ಪಡಲಿದೆ. ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರನ್ನು ಕಾಂಗ್ರೆಸ್ ಪಕ್ಷವು ಈ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಬಿಜೆಪಿ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ವರ್ಮಾ ಅವರನ್ನು ಕಣಕ್ಕಿಳಿಸಿದೆ. ‘ಅಜೆಂಡಾ ಆಜ್ ತಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ದೆಹಲಿ ಸಿಎಂ ಅತಿಶಿ ಕೂಡ ತಮ್ಮ ಹಳೆಯ ಕ್ಷೇತ್ರವಾದ ಕಲ್ಕಾಜಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ. ನಾಲ್ಕನೇ ಬಾರಿಗೆ ಉತ್ತಮ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.