Saturday, July 12, 2025

ಸತ್ಯ | ನ್ಯಾಯ |ಧರ್ಮ

ತನಿಖೆಗೆ ಹೆದರಲ್ಲ; ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.

ಮೈಸೂರು ಲೋಕಾಯುಕ್ತಕ್ಕೆ ಶಿಫಾರಸ್ಸು

“ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು.

ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ ಮುಂದುವರೆಯಲಿದೆ

ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮೂಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗ ಅದರ ತನಿಖೆ ಮುಂದುವರೆಯುತ್ತದೆಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ ಎಂದರು. ಸಂಪೂರ್ಣ ಪ್ರತಿಕ್ರಿಯೆ ನೀಡಲು ನಾನು ಪೂರ್ಣ ಆದೇಶ ಓದಿದ ಮೇಲೆ ನಾಳೆ ಬೆಳಿಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page