Thursday, August 21, 2025

ಸತ್ಯ | ನ್ಯಾಯ |ಧರ್ಮ

ಸರ್ಕಾರ ರಚನೆಯಾದ ತಕ್ಷಣ ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡುವಿಗೆ ಗಾಳ ಹಾಕಿದ ಕಾಂಗ್ರೆಸ್

ಲೋಕಸಭೆ ಚುನಾವಣೆ ಫಲಿತಾಂಶದ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿ, 2014ರ ಅಪೂರ್ಣ ಕೆಲಸವನ್ನು ಇಂಡಿಯಾ ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ. ಹೊಸ ರಾಜ್ಯವಾದ ಆಂಧ್ರಪ್ರದೇಶಕ್ಕೆ 5 ವರ್ಷಗಳ ಕಾಲ ವಿಶೇಷ ವರ್ಗದ ಸ್ಥಾನಮಾನ ನೀಡುವುದಾಗಿ 2014ರ ಫೆ.14ರಂದು ಪ್ರಧಾನಿ ಡಾ.ಮನಮೋಹನ್ ಸಿಂಗ್ ಭರವಸೆ ನೀಡಿದ್ದರು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಮೋದಿ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಅವರು ಹೇಳಿದರು. ಹಾಗೆ ನೋಡಿದರೆ ಅದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನ ನೀಡುವ ನೀತಿಯನ್ನು ಕೊನೆಗೊಳಿಸಿದೆ ಎಂದು ಅವರು ದೂರಿದರು.

ಕಾಂಗ್ರೆಸ್ ತನ್ನ 2024 ರ ಚುನಾವಣಾ ಪ್ರಣಾಳಿಕೆಯಲ್ಲಿ ಡಾ. ಮನಮೋಹನ್ ಸಿಂಗ್ ಭರವಸೆ ನೀಡಿದಂತೆ ಆಂಧ್ರ ಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡುವುದಾಗಿ ಘೋಷಿಸಿದೆ. ಇದು ನಮ್ಮ ಗ್ಯಾರಂಟಿ ಎಂದು ಹೇಳಿದೆ.

ಈ ಹೇಳಿಕೆ ಬಹುಮತದ ಹೊಸ್ತಿಲಿನಲ್ಲಿ ನಿಂತಿರುವ ಇಂಡಿಯಾ ಒಕ್ಕೂಟ ಚಂದ್ರಬಾಬು ನಾಯ್ಡು ನೇತ್ರತ್ವದ ಟಿಡಿಪಿ ಬೆಂಬಲ ಸಲುವಾಗಿ ಈಗ ಮತ್ತೆ ಮುನ್ನೆಲೆಗೆ ಬಂದಿದೆ ಎನ್ನಲಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಸರ್ಕಾರ ರಚನೆಯಲ್ಲಿ ನಿರ್ಣಾಯಕರಾಗಿ ಹೊರಹೊಮ್ಮಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page