Monday, August 5, 2024

ಸತ್ಯ | ನ್ಯಾಯ |ಧರ್ಮ

ಮೂಡಾ ಪ್ರಕರಣ ; ಇಂದು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡ್ತಾರಾ ಗವರ್ನರ್?

ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜು.26ರಂದು ಶೋಕಾಸ್ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಆ ಪ್ರಕರಣದ ಬಗ್ಗೆ ತೆಗೆದುಕೊಳ್ಳಬಹುದಾದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ. ಬಿಜೆಪಿ ಅಧಿಕಾರದಲ್ಲಿ ಇಲ್ಲದ ಕಡೆಗಳಲ್ಲಿ ರಾಜ್ಯಪಾಲರ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪಕ್ಷದ ವಿರುದ್ಧವೂ ಕಾಂಗ್ರೆಸ್ ರಣತಂತ್ರ ಹೂಡಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲ್ಲ ಅನ್ನುವ ವಿಶ್ವಾಸ ಇದೆ. ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ ನಂತರ ದೆಹಲಿಗೆ ತೆರಳಿದ್ದ ರಾಜ್ಯಪಾಲರು ಇಂದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಇತ್ತ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಅಭಯ ಸೂಚಿಸಿದ್ದು, ಹಾಗೊಂದು ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನು ಸಮರಕ್ಕೂ ಮುಂದಾಗಿ, ಆದರೆ ರಾಜೀನಾಮೆ ನೀಡುವ ಪ್ರಸಂಗದ ಅಗತ್ಯವೇ ಇಲ್ಲ ಎಂದು ತಿಳಿಸಿದೆ.

ಇನ್ನೊಂದು ಕಡೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಮುಜುಗರಕ್ಕೆ ಸಿಕ್ಕಿಸಲು ಪ್ರಯತ್ನಿಸಿರುವ ಬಿಜೆಪಿ ಪಕ್ಷದ ವಿರುದ್ಧ ಅಹಿಂದ ಸಮುದಾಯಗಳ ಒಕ್ಕೂಟ ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದು, ಹಾಗೊಂದು ವೇಳೆ ಸಿದ್ದರಾಮಯ್ಯ ಪದಚ್ಯುತಿಯಂತಹ ಬೆಳವಣಿಗೆ ನಡೆದರೆ, ಒಟ್ಟಾರೆ ಹಿಂದುಳಿದ ವರ್ಗಗಳು ಬಿಜೆಪಿ, ಜೆಡಿಎಸ್ ವಿರುದ್ಧ ದೊಡ್ಡ ಮಟ್ಟದ ಸಮರಕ್ಕೆ ಮುಂದಾಗುವ ಸಾಧ್ಯತೆ ಕೂಡ ತಳ್ಳಿ ಹಾಕುವಂತಿಲ್ಲ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page