Sunday, January 25, 2026

ಸತ್ಯ | ನ್ಯಾಯ |ಧರ್ಮ

ವಿಮ್ಸ್‌ ಆಸ್ಪತ್ರೆ ದುರಂತ: ಸರ್ಕಾರದ ಬೇಜವಾಬ್ದಾರಿತನದ ಕುರಿತು ಸಿದ್ದರಾಮಯ್ಯ ಆಕ್ರೋಶ

ಬಳ್ಳಾರಿ: ಬಳ್ಳಾರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ ಹಿನ್ನಲೆ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಕಾರ್ಯ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆಗೆ ಸ್ಥಳೀಯ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯೇ ನೇರ ಹೊಣೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ವಿಮ್ಸ್‌ ಆಸ್ಪತ್ರೆ ಬಳ್ಳಾರಿ

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಅಂದು ಚಾಮರಾಜನಗರದಲ್ಲಿ ಇಂತಹದ್ದೇ ದುರಂತ ಸಂಭವಿಸಿತ್ತು, ಇಂದು ಬಳ್ಳಾರಿಯಲ್ಲಿ ದುರಂತ ನಡೆದಿದೆ. ಹೀಗೆ ಈ ಸರ್ಕಾರದ ಬೇಜವಾಬ್ದಾರಿತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಮ್ಸ್ ಆಸ್ಪತ್ರೆಯ ದುರಂತದಲ್ಲಿ ಮಡಿದ ಮೃತರ ಕುಟುಂಬಗಳಿಗೆ ಬಿಜೆಪಿ ಸರ್ಕಾರ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿ ಮೃತರ ಪ್ರಾಣಕ್ಕೆ ಜುಜುಬಿ ಬೆಲೆ ಕಟ್ಟಿದೆ. ಇದು ಖಂಡನೀಯ. ಮೃತರ ಕುಟುಂಬಕ್ಕೆ ಕನಿಷ್ಠ ರೂ. 25 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ  ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page