Tuesday, November 19, 2024

ಸತ್ಯ | ನ್ಯಾಯ |ಧರ್ಮ

ಡಿ.9 ರಿಂದ ಚಳಿಗಾಲದ ಅಧಿವೇಶನ ; ಅಮೇರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅತಿಥಿಯಾಗಿ ಬರುವ ಸಾಧ್ಯತೆ

ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.9 ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವಾಲಯ ಕಡತ ರವಾನಿಸಿದೆ.

ಇತ್ತೀಚೆಗಷ್ಟೇ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅಧಿವೇಶನಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಬೆಳಗಾವಿಯಲ್ಲಿ 1924ರ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಡಿ.26 ಹಾಗೂ 27ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಪಕ್ಷ ಹಾಗೂ ರಾಜ್ಯ ಸರಕಾರ ಉದ್ದೇಶಿಸಿದೆ.

2024 ರ ಚಳಿಗಾಲದ ಅಧಿವೇಶನವನ್ನು ರಾಷ್ಟ್ರಮಟ್ಟದ ಕಾರ್ಯಕ್ರಮವಾಗಿ ಆಯೋಜಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದರಂತೆ ಕಾಂಗ್ರೆಸ್ ಸರ್ಕಾರ ವಿವಿಧ ಸಮಿತಿಗಳನ್ನು ರಚಿಸಿದ್ದು, ಅಮೇರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಸಿದ್ಧತೆ ನಡೆಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page