Wednesday, November 20, 2024

ಸತ್ಯ | ನ್ಯಾಯ |ಧರ್ಮ

25ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ, 24ರಂದು ಸರ್ವಪಕ್ಷ ಸಭೆ ಕರೆದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ನವೆಂಬರ್ 24 (ಭಾನುವಾರ) ರಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ಈ ವಿಷಯ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನ.24ರಂದು ಸರ್ವಪಕ್ಷ ಸಭೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಸಂಸತ್ತಿನ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಿ ಡಿಸೆಂಬರ್ 20ರಂದು ಕೊನೆಗೊಳ್ಳುತ್ತದೆ.

ಸಂವಿಧಾನ ಅಂಗೀಕಾರವಾಗಿ 75 ವರ್ಷಗಳಾದ ಸಂದರ್ಭದಲ್ಲಿ ಸೆಂಟ್ರಲ್ ಹಾಲ್ ಅಥವಾ ಹಳೆಯ ಸಂಸತ್ ಭವನದಲ್ಲಿ ಸಂವಿಧಾನ್ ಸದನ್ (ಸಂವಿಧಾನ ದಿನ) ನಡೆಯಲಿದೆ. ಪ್ರತಿಪಕ್ಷಗಳಿಗೆ ತನ್ನ ಕಾರ್ಯಸೂಚಿಯನ್ನು ತಿಳಿಸಲು ಮತ್ತು ಸಂಸತ್ತಿನಲ್ಲಿ ಪಕ್ಷಗಳು ಚರ್ಚಿಸಲು ಬಯಸುವ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರವು ಸಭೆಗಳ ಮೊದಲು ಸರ್ವಪಕ್ಷ ಸಭೆಯನ್ನು ಆಯೋಜಿಸುವುದು ವಾಡಿಕೆ.

ಸಂಸತ್ತಿನ ಚಳಿಗಾಲದ ಅಧಿವೇಶನಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ಹಲವು ವಿಧೇಯಕಗಳನ್ನು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಈ ಸಭೆಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜೆಪಿಸಿ ವರದಿ ಸಂಸತ್ತಿನ ಮುಂದೆ ಬರಲಿದೆ. ಬಳಿಕ ಸದನದಲ್ಲಿ ಮಸೂದೆ ಮಂಡಿಸಲಾಗುವುದು. ಅಲ್ಲದೇ ಏಕಕಾಲದ ಚುನಾವಣೆಗೆ ಸಂಬಂಧಿಸಿದ ವಿಧೇಯಕ ತರಲು ಸರ್ಕಾರ ಮುಂದಾಗಿದೆ. 18ನೇ ಲೋಕಸಭೆಯ ಮೊದಲ ಮುಂಗಾರು ಅಧಿವೇಶನ ಜುಲೈ 22 ರಿಂದ ಆಗಸ್ಟ್ 9 ರವರೆಗೆ ನಡೆಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page