Sunday, July 27, 2025

ಸತ್ಯ | ನ್ಯಾಯ |ಧರ್ಮ

ಸುಮಲತಾ ಬಿಜೆಪಿ ಸೇರುತ್ತಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ: ಸಿಟಿ ರವಿ

ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಬಾರಿ ದೊಡ್ಡ ಬೆಳವಣಿಗೆಯಾಗಿದ್ದು ಸಂಸದ ಅವರು ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಕುರಿತಾಗಿ ಮಾಜಿ ಸಚಿವ ಸಿ ಟಿ ರವಿ ಸುಮಲತಾ ಅವರು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಾಗಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಸಂಸದ ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಸುಮಲತಾ ರಾಜಕೀಯ ಪ್ರಬುದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದು, ಎಲ್ಲೂ ಬ್ಯಾಲೆನ್ಸ್ ಕಳೆದುಕೊಳ್ಳದೆ ತೂಕವಾಗಿ ಮಾತನಾಡುತ್ತಾರೆ ಸಂಸದೆ ಸುಮಲತಾಗೆ ತಮ್ಮದೇ ಆದ ಪ್ರಭಾವ ಬೆಂಬಲವಿದೆ ಎಂದರು.

ಮೈತ್ರಿ ಅಭ್ಯರ್ಥಿಗೆ ಸಂಸದ ಸುಮಲತಾ ಅವರು ಬೆಂಬಲ ನೀಡಿದ್ದಾರೆ. ಮಂಡ್ಯದಲ್ಲಿ ಸುಮಲತಾ ಮೂಲಕ ಪಕ್ಷ ಬಲವರ್ಧನೆ ಮಾಡುತ್ತೇವೆ. ಸಂಸದೆ ಸುಮಲತಾ ಪಕ್ಷ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ದೊಡ್ಡ ಆನೆಬಲಬದಂತಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಹೇಳಿಕೆ ನೀಡಿದರು.

ಬಿಜೆಪಿ ಜೆಡಿಎಸ್ ಸಮನ್ವಯ ಸಭೆಗೆ ಪ್ರೀತಮ್ ಗೌಡ ಗೈರು ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುವ ವಿಶ್ವಾಸವಿದೆ. ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಅವರು ಭಾಗವಹಿಸಿದ್ದರು ಎಂದು ಮಾಡಿ ರವಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page