ಹಾಸನ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಧಾರುಣ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕಂದಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ಆಲೂರು ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ KA-01-MR-3649 ನಂಬರ್‌ನ ಕಾರು, ದಾಟುತ್ತಿದ್ದ ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ಸಿಗದೆ ಮಹಿಳೆಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನೂ ಈ ಘಟನೆ ಬಗ್ಗೆ ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
