ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಭೀಕರ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಇತ್ತ ಮಹಾಮಳೆಗೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ಶಶಿಕಲಾ, ಖಾಸಗಿ ಕಂಪನಿಯ ಉದ್ಯೋಗಿ ಎಂದು ಗುರುತಿಸಲಾಗಿದೆ.
ಮಳೆಯಿಂದ ಬೆಂಗಳೂರಿನಲ್ಲಿ ಬಹಳ ತೊಂದರೆಯಾಗಿದೆ. ನಗರದಲ್ಲಿ ವೈಟ್ ಟಾಪಿಂಗ್, ಕೇಬಲ್ ವೈರ್ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಮಳೆಯಿಂದ ಸಮಸ್ಯೆಯಾಗಿದೆ. ಮಳೆಯಿಂದಾಗುವ ಅನಾನುಕೂಲತೆಗಳ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.