ಮಹಿಳೆ ಕಿಡ್ನ್ಯಾಪ್ ಪ್ರಕರಣ ; ಶಾಸಕ ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ನಗರ ಮೂಲದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಲಾಗಿತ್ತು ಎಂದು ಚಾರ್ಜಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂದು ಉಲ್ಲೇಖಿಸುವ ಮೂಲಕ ಭವಾನಿ ರೇವಣ್ಣ ಅವರನ್ನೂ ಎಸ್‌ಐಟಿ ಅಧಿಕಾರಿಗಳು ಆರೋಪಿಗಳ ಪಟ್ಟಿಯಲ್ಲಿ ಸೇರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಈ ಹಿಂದೆ ಬಂಧಿಸಿದ್ದರು. ಸದ್ಯ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇಬ್ಬರೂ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. 

Related Articles

ಇತ್ತೀಚಿನ ಸುದ್ದಿಗಳು