Home ಅಪರಾಧ ಮಹಿಳೆಯಿಂದ ಚಿನ್ನ ವಂಚನೆ ಪ್ರಕರಣ l ಇಂದು ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು

ಮಹಿಳೆಯಿಂದ ಚಿನ್ನ ವಂಚನೆ ಪ್ರಕರಣ l ಇಂದು ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು

0

ಬೆಂಗಳೂರು: ಚಿನ್ನದ ಅಂಗಡಿ ಒಳಹೊಕ್ಕು ಚಿನ್ನ ಖರೀದಿಸುವ ನೆಪದಲ್ಲಿ ಆಭರಣ ಅಂಗಡಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಇದೇ ಪ್ರಕರಣದಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾ ಗೌಡ ಎಂಬ ಮಹಿಳೆಯನ್ನು ಬಂಧಿಸಿ ಅವರಿಂದ ಚಿನ್ನ, ಕಾರು ಹಾಗೂ ಇತರೆ ವಸ್ತುಗಳನ್ನು ಜಪ್ತಿ‌ ಮಾಡಿಕೊಂಡಿದ್ದರು. ಆರೋಪಿ ವಿಚಾರಣೆ ವೇಳೆ ವರ್ತೂರ್ ಪ್ರಕಾಶ್ ಅವರ ಹೆಸರು ಬಾಯ್ಬಿಟ್ಟಿದ್ದರು. ಆರೋಪಿ ಹೇಳಿಕೆ ಆಧರಿಸಿ ಪ್ರಕಾಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು.‌ ಇಂದು (ಮಂಗಳವಾರ) ಬೆಳಿಗ್ಗೆ ವಿಚಾರಣೆಗೆ ಪ್ರಕಾಶ್ ಹಾಜರಾಗಿದ್ದಾರೆ, ಎಸಿಪಿ ಗೀತಾ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯಿತು ಎಂದು ಎಂದು ತಿಳಿದು ಬಂದಿದೆ.

You cannot copy content of this page

Exit mobile version