ಬೆಳಗಾವಿ : ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದ ಪರಿಣಾಮ ಓರ್ವ ಕಾರ್ಮಿಕ (Labor) ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ರಮೇಶ್ ಮೃತ ದುರ್ದೈವಿಯಾಗಿದ್ದು, ನಂದಕುಮಾರ್ ಹಾಗೂ ಮಹೇಂದ್ರ ಗಂಭೀರ ಗಾಯಗೊಂಡವರಾಗಿದ್ದಾರೆ. ಈ ಮೂವರು ಕಾರ್ಮಿಕರು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಇವರನ್ನು ಬಾಗಲಕೋಟ ಜಿಲ್ಲೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮೇಶ್ ಮೃತಪಟ್ಟಿದ್ದಾನೆ. ಈ ಕಾರ್ಮಿಕರು ಬಿಹಾರದಿಂದ ಆಗಮಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ರಮೇಶ್ ಮೃತಪಟ್ಟ ವಿಷಯ ಕೇಳಿ ಆಕ್ರೋಶಗೊಂಡ ಕಾರ್ಮಿಕರು ಕಾರ್ಖಾನೆಯ ಸೆಕ್ಯೂರಿಟಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಕಾರ್ಖಾನೆಯ ಸುತ್ತಲು ಬಿಗಿ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿ ಕುಲಗೋಡ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
