ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾಜಾ: ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು!

P

Peepal Media • ವಿದೇಶ

• 1 ನಿಮಿಷದ ಓದು

ಗಾಜಾ: ಶಾಲೆ ಮೇಲೆ ಇಸ್ರೇಲ್ ದಾಳಿ, 100ಕ್ಕೂ ಹೆಚ್ಚು ಮಂದಿ ಸಾವು!

ಹಮಾಸ್ ಮತ್ತು ಹಿಜ್ಬುಲ್ಲಾದ ಪ್ರಮುಖ ನಾಯಕರ ಹತ್ಯೆಗಳ ಹಿನ್ನೆಲೆಯಲ್ಲಿ, ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ದಾಳಿಯಾಗುವ ಸಾಧ್ಯತೆಯಿದೆ.

ಪಶ್ಚಿಮ ಏಷ್ಯಾದ ಪರಿಸ್ಥಿತಿಯು ತೀವ್ರವಾಗಿ ಬದಲಾಗಿದೆ. ಈ ನಡುವೆ ಇಸ್ರೇಲ್ ಗಾಜಾದ ಮೇಲೆ ದಾಳಿ ಮಾಡುವುದನ್ನು ಮುಂದುವರೆಸಿದೆ. ಇತ್ತೀಚೆಗೆ ಇಸ್ರೇಲ್ ಪೂರ್ವ ಗಾಜಾದ ಶಾಲೆಯೊಂದರಲ್ಲಿ ಅಡಗಿ ಕುಳಿತಿದ್ದವರ ಮೇಲೆ ದಾಳಿ ನಡೆಸಿದೆ.

ಅಂತರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ಪೂರ್ವ ಗಾಜಾದಲ್ಲಿ ನಿರಾಶ್ರಿತರು ಅಡಗಿರುವ ಶಾಲೆಯ ಮೇಲೆ ಇಸ್ರೇಲ್ ದಾಳಿ ಮಾಡಿದೆ. ಈ ದಾಳಿಯಲ್ಲಿ ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಇಸ್ರೇಲ್ ಗಾಜಾದ ಮೂರು ಶಾಲೆಗಳ ಮೇಲೆ ದಾಳಿ ನಡೆಸಿತ್ತು. ಇತ್ತೀಚೆಗೆ ಶಾಲೆಯೊಂದರ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ 30 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಆಗಸ್ಟ್ 1ರಂದು, ದಲಾಲ್ ಅಲ್-ಮುಘ್ರಾಬಿ ಶಾಲೆಯ ಮೇಲಿನ ದಾಳಿಯಲ್ಲಿ 15 ಜನರು ಸಾವನ್ನಪ್ಪಿದರು.

ಅಕ್ಟೋಬರ್ 7ರಂದು ಹಮಾಸ್ ಮಿಂಚಿನ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಈ ಯುದ್ಧದಲ್ಲಿ ಇದುವರೆಗೆ ಗಾಜಾದಲ್ಲಿ 40,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಇತ್ತೀಚೆಗೆ ಹಮಾಸ್ ಮತ್ತು ಹಿಜ್ಬುಲ್ಲಾದ ಪ್ರಮುಖ ನಾಯಕರ ಹತ್ಯೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಹಮಾಸ್ ಸಂಘಟನೆಯನ್ನು ನಿರ್ನಾಮ ಮಾಡುವುದಾಗಿ ಹೇಳಿಕೊಂಡು ಇಸ್ರೇಲ್ ಗಾಜಾದ ಮೇಲೆ ಬಾಂಬ್ ಮಳೆಗರೆಯುತ್ತಿದೆ.

ಕಟ್ಟಡಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ಕುಡಿಯುವ ನೀರಿನ ವ್ಯವಸ್ಥೆಗಳು ಈಗಾಗಲೇ ನಾಶವಾಗಿವೆ. ಈ ದಾಳಿಯಲ್ಲಿ ಇದುವರೆಗೆ ಸುಮಾರು 40 ಸಾವಿರ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

P

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version