ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುದ್ಧಪೀಡಿತ ಗಾಜಾದತ್ತ ಹೊರಟ ಹೋರಾಟಗಾರ್ತಿ ಗ್ರೆಟಾ ಥನಬರ್ಗ್; ಇದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಗೊತ್ತು ಎಂದ ಇಸ್ರೇಲ್

PPeepal Media Desk

Peepal Media Desk • ಮೀಡಿಯಾ, ವಿದೇಶ

• 1 ನಿಮಿಷದ ಓದು

ಯುದ್ಧಪೀಡಿತ ಗಾಜಾದತ್ತ ಹೊರಟ ಹೋರಾಟಗಾರ್ತಿ ಗ್ರೆಟಾ ಥನಬರ್ಗ್; ಇದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಗೊತ್ತು ಎಂದ ಇಸ್ರೇಲ್

ಪರಿಸರ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಗ್ರೆಟಾ ಥನಬರ್ಗ್ ಯುದ್ಧಪೀಡಿತ ಪ್ರದೇಶ ಗಾಜಾಗೆ ಪ್ರಯಾಣ ಬೆಳೆಸಿದ್ದಾರೆ. ಸಿಸಿಲಿ ಬಂದರಿನಿಂದ ಸಣ್ಣ ಹಡಗೊಂದರಲ್ಲಿ ಪ್ರಯಾಣ ಬೆಳೆಸಿದ ಗ್ರೆಟಾ 2 ಸಾವಿರ ಕಿಲೋಮೀಟರ್ ಪ್ರಯಾಣದ ನಂತರ ಯುದ್ಧಪೀಡಿತ ಪ್ರದೇಶ ಗಾಜಾ ತಲುಪಲಿದ್ದಾರೆ.

ಗಾಜಾಗೆ ಮಾನವೀಯ ನೆರವಿನ ನಿರ್ಬಂಧ ಹಾಗೂ ಯುದ್ಧಾಪರಾಧವನ್ನು ವಿರೋಧಿಸಿ ಶಾಂತಿಯ ಹೋರಾಟದ ರೂಪದಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಗ್ರೆಟಾ ಹೇಳಿದ್ದಾರೆ. ಗ್ದೆಟಾ ಥನ್‌ಬರ್ಗ್ ಮತ್ತು ಗೇಮ್ ಆಫ್ ಥ್ರೋನ್ಸ್ ನಟ ಲಿಯಾಮ್ ಕನ್ನಿಂಗ್ಹ್ಯಾಮ್ ಸೇರಿದಂತೆ ಒಟ್ಟು 12 ಕಾರ್ಯಕರ್ತರು ಗಾಜಾ ಪಟ್ಟಿಗೆ ನೆರವು ಮತ್ತು ಮಾನವೀಯ ನೆರವು ನೀಡಲು ಮ್ಯಾಡ್ಲೀನ್ ಹಡಗಿನಲ್ಲಿದ್ದಾರೆ.

ಗ್ರೆಟಾ ಅವರ ಪ್ರಯಾಣದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇಸ್ರೇಲ್ ನಾವು ಎಲ್ಲದಕ್ಕೂ ಸಿದ್ಧ ಎಂದು ಹೇಳಿದೆ. ಲಂಡನ್‌ನ ಟೈಮ್ಸ್ ಜೊತೆ ಮಾತನಾಡಿದ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ವಕ್ತಾರ ಬ್ರಿಗೇಡಿಯರ್ ಜನರಲ್ ಎಫೀ ಡೆಫ್ರಿನ್, ನೆರವು ಹಡಗು ಆಗಮನವನ್ನು ತಡೆಯಲು ಇಸ್ರೇಲ್ ಸೇನೆಯು “ಕ್ರಮ ಕೈಗೊಳ್ಳಲು ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

“ಇಸ್ರೇಲ್ ನೌಕಾಪಡೆಯು ಇಸ್ರೇಲ್‌ನ ಕಡಲ ಪ್ರದೇಶ ಮತ್ತು ಸಮುದ್ರದಲ್ಲಿನ ಗಡಿಗಳನ್ನು ರಕ್ಷಿಸಲು ಹಗಲು ರಾತ್ರಿ ಕಾರ್ಯನಿರ್ವಹಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ನಾವು ಹಲವು ಅನುಭವವನ್ನು ಗಳಿಸಿದ್ದೇವೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಕಾರ್ಯನಿರ್ವಹಿಸುತ್ತೇವೆ” ಎಂದು ಬ್ರಿಗೇಡಿಯರ್ ಜನರಲ್ ಎಫೀ ಡೆಫ್ರಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಡಿಎಫ್‌ನ ಎಚ್ಚರಿಕೆಗೆ ಪ್ರತಿಕ್ರಿಯೆಯಾಗಿ, ಹಡಗಿನಲ್ಲಿದ್ದ ಕಾರ್ಯಕರ್ತರು “ಮ್ಯಾಡ್ಲೀನ್ ಮೇಲೆ ದಾಳಿ ಮಾಡುವ ಇಸ್ರೇಲ್‌ನ ಘೋಷಿತ ಉದ್ದೇಶವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದ್ದಾರೆ. ಹಾಗೆಯೇ ನೆರವು ನೀಡುವ ಹಡಗನ್ನು ‘ಬೆದರಿಕೆ’ ಎಂದು ಹೇಳಿದ ಬಗ್ಗೆ ಖಂಡಿಸಿದ್ದಾರೆ.

ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟದಿಂದ ಹೊರಟ ಮ್ಯಾಡ್ಲೀನ್ ಹಡಗು ಜೂನ್ 7 ರೊಳಗೆ ಗಾಜಾ ಪಟ್ಟಿಯನ್ನು ತಲುಪುವ ನಿರೀಕ್ಷೆಯಿದೆ. ಗಾಜಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯ ಹೆಸರಿನ ಈ ಹಡಗು ಜೂನ್ 1 ರಂದು ಸಿಸಿಲಿಯ ಕ್ಯಾಟಾನಿಯಾದಿಂದ ಹೊರಟಿದೆ. ಫೋರೆನ್ಸಿಕ್ ಆರ್ಕಿಟೆಕ್ಚರ್ ಹಡಗಿನ ಸ್ಥಳವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 4 ರ ಹೊತ್ತಿಗೆ ಹಡಗು ಸಿಸಿಲಿ ಬಂದರಿನಿಂದ ಸುಮಾರು 600 ಕಿಮೀ (375 ಮೈಲಿ) ದೂರದಲ್ಲಿತ್ತು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು