ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೊಂದು ಜಲಸಂಧಿ ಬಂದ್?: ಬಾಬ್ ಅಲ್-ಮಂಡೇಬ್ ಮುಚ್ಚುವುದಾಗಿ ಹೌತಿ ಸಂಘಟನೆ ಎಚ್ಚರಿಕೆ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

PPeepal Media

Peepal Media ವಿದೇಶ

• 1 ನಿಮಿಷದ ಓದು

ಮತ್ತೊಂದು ಜಲಸಂಧಿ ಬಂದ್?: ಬಾಬ್ ಅಲ್-ಮಂಡೇಬ್ ಮುಚ್ಚುವುದಾಗಿ ಹೌತಿ ಸಂಘಟನೆ ಎಚ್ಚರಿಕೆ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಗಳ ಹಿನ್ನೆಲೆಯಲ್ಲಿ, ಇರಾನ್ ಬೆಂಬಲಿತ ಹೌತಿ ಬಂಡುಕೋರರು ಯುದ್ಧಕ್ಕೆ ಧುಮುಕುವ ಮುನ್ಸೂಚನೆ ನೀಡಿದ್ದಾರೆ. “ನಮ್ಮ ಬೆರಳುಗಳು ಟ್ರಿಗ್ಗರ್ ಮೇಲಿವೆ” ಎಂದು ಎಚ್ಚರಿಸಿರುವ ಸಂಘಟನೆ, ಪರಿಸ್ಥಿತಿ ಕೈಮೀರಿದರೆ ಕೆಂಪು ಸಮುದ್ರದ ಪ್ರಮುಖ ಮಾರ್ಗವಾದ ಬಾಬ್ ಅಲ್-ಮಂಡೇಬ್ ಅನ್ನು ಮುಚ್ಚುವುದಾಗಿ ಘೋಷಿಸಿದೆ.

ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿದ್ದರಿಂದ ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ತೈಲ ಮತ್ತು ಎಲ್‌ಪಿಜಿ ದರಗಳು ಗಗನಕ್ಕೇರಿವೆ. ಈಗ ಬಾಬ್ ಅಲ್-ಮಂಡೇಬ್ ಕೂಡ ಬಂದ್ ಆದರೆ ಜಾಗತಿಕ ಆರ್ಥಿಕತೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ.

ಬಾಬ್ ಅಲ್-ಮಂಡೇಬ್ ಜಲಸಂಧಿಯನ್ನು ‘ಕಣ್ಣೀರಿನ ದ್ವಾರ’ (Gate of Tears) ಎಂದು ಕರೆಯಲಾಗುತ್ತದೆ. ಇದು ಕೆಂಪು ಸಮುದ್ರವನ್ನು ಏಡನ್ ಕೊಲ್ಲಿ ಮತ್ತು ಹಿಂದೂ ಮಹಾಸಾಗರದೊಂದಿಗೆ ಸಂಪರ್ಕಿಸುತ್ತದೆ. ಸೂಯೆಜ್ ಕಾಲುವೆಯ ಮೂಲಕ ಏಷ್ಯಾ ಮತ್ತು ಯುರೋಪ್ ನಡುವೆ ಸಂಚರಿಸುವ ಪ್ರತಿ ನೌಕೆಯೂ ಈ ಮಾರ್ಗವನ್ನೇ ಬಳಸಬೇಕು.

ಒಂದು ವೇಳೆ ಈ ಮಾರ್ಗ ಮುಚ್ಚಲ್ಪಟ್ಟರೆ, ಹಡಗುಗಳು ಆಫ್ರಿಕಾದ ‘ಕೇಪ್ ಆಫ್ ಗುಡ್ ಹೋಪ್’ ಮೂಲಕ ಸುತ್ತುಬಳಸಿ ಹೋಗಬೇಕಾಗುತ್ತದೆ. ಇದರಿಂದ 20-25 ದಿನಗಳ ಪ್ರಯಾಣವು 40 ದಿನಗಳವರೆಗೆ ವಿಸ್ತರಿಸುತ್ತದೆ. ಜಾಗತಿಕ ವ್ಯಾಪಾರದ ಶೇ. 12ರಷ್ಟು ಮತ್ತು ಶೇ. 10ರಷ್ಟು ತೈಲ ಹಾಗೂ ಎಲ್‌ಎನ್‌ಜಿ ರವಾಣೆ ಈ ಮಾರ್ಗದಲ್ಲೇ ನಡೆಯುವುದರಿಂದ ಇದರ ಮಹತ್ವ ಅತಿ ದೊಡ್ಡದಿದೆ.

ಹೌತಿಗಳು ಈ ಜಲಸಂಧಿಯನ್ನು ಮುಚ್ಚಿದರೆ ಕೇವಲ ಇಂಧನ ಮಾತ್ರವಲ್ಲದೆ ಎಲೆಕ್ಟ್ರಾನಿಕ್ಸ್, ಯಂತ್ರೋಪಕರಣಗಳು ಮತ್ತು ಆಹಾರ ಪದಾರ್ಥಗಳ ಪೂರೈಕೆ ಸರಪಳಿಯೂ ಕಡಿತಗೊಳ್ಳಲಿದೆ. ರವಾನೆ ವೆಚ್ಚ ಹೆಚ್ಚಾಗುವುದರಿಂದ ಹಣದುಬ್ಬರ ಏರಿಕೆಯಾಗಿ ವಿಶ್ವದಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಈಗಾಗಲೇ ಹಾರ್ಮುಜ್ ಸಂಘರ್ಷದಿಂದ ತತ್ತರಿಸಿರುವ ದೇಶಗಳಿಗೆ ಇದು ‘ಬಾಣಲೆಯಿಂದ ಒಲೆಗೆ ಬಿದ್ದಂತಾಗಲಿದೆ’ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು