ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೊಹಮ್ಮದ್‌ ಯುನೂಸ್‌ ಮಾರ್ಗದರ್ಶನದಂತೆ ಸರ್ಕಾರ ನಡೆಸಲು ಬಾಂಗ್ಲಾ ವಿದ್ಯಾರ್ಥಿಗಳ ಹೋರಾಟ: ಯಾರಿವರು ಯೂನುಸ್?‌

P

Peepal Media Desk • ವಿದೇಶ

• 1 ನಿಮಿಷದ ಓದು

ಮೊಹಮ್ಮದ್‌ ಯುನೂಸ್‌ ಮಾರ್ಗದರ್ಶನದಂತೆ ಸರ್ಕಾರ ನಡೆಸಲು ಬಾಂಗ್ಲಾ ವಿದ್ಯಾರ್ಥಿಗಳ ಹೋರಾಟ: ಯಾರಿವರು ಯೂನುಸ್?‌

ಢಾಕಾ: ಸರ್ಕಾರ ರಚಿಸುವುದಾದರೆ ನೊಬೆಲ್‌ ಪುರಸ್ಕೃತ ಮೊಹಮ್ಮದ್‌ ಯುನುಸ್‌ ಮಾರ್ಗದರ್ಶನ ಪಡೆದುಕೊಂಡು ಸರ್ಕಾರ ರಚಿಸಿ ಎಂಬುದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬೇಡಿಕೆಗಳಲ್ಲಿ ಪ್ರಮುಖ ಬೇಡಿಕೆಯಾಗಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಕೆಲಸ ಮಾಡಲು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆ ಬಳಿಕ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. ಇದರ ಬೆನ್ನಲ್ಲೇ, ಸೇನಾ ಮುಖ್ಯಸ್ಥರು ಮಧ್ಯಂತರ ಸರ್ಕಾರ ರಚಿಸಿದ್ದಾರೆ. ಈ ಸರ್ಕಾರವನ್ನು ಮೊಹಮ್ಮದ್ ಯೂನುಸ್ ಅವರ ಮಾರ್ಗದರ್ಶನದಂತೆ ನಡೆಸಬೇಕು. ಅವರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ವಿದ್ಯಾರ್ಥಿ ಹೋರಾಟಗಾರರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ, ಯೂನಸ್ ಒಪ್ಪಿಗೆ ಸೂಚಿಸಿದ್ದಾರೆ.

‘ಈ ಕುರಿತಂತೆ ವಿದ್ಯಾರ್ಥಿಗಳ ಪರವಾಗಿ ನನ್ನನ್ನು ಮೊದಲ ಬಾರಿಗೆ ಸಂಪರ್ಕಿಸಿದಾಗ ನಾನು ನಿರಾಕರಿಸಿದ್ದೆ. ಮೊದಲಿಗೆ ಒಪ್ಪಿಗೆ ಸೂಚಿಸಿರಲಿಲ್ಲ. ನಾನು ಪೂರ್ಣಗೊಳಿಸಬೇಕಾದ ಬಹಳಷ್ಟು ಕೆಲಸಗಳಿವೆ. ಆದರೆ, ವಿದ್ಯಾರ್ಥಿಗಳು ಪದೇಪದೇ ಮನವಿ ಸಲ್ಲಿಸಿದ್ದರಿಂದ ಒಪ್ಪಿಕೊಂಡೆ’ ಎಂದು ಯೂನುಸ್ ಹೇಳಿರುವುದಾಗಿ ಡೈಲಿ ಸ್ಟಾರ್ ವರದಿ ಮಾಡಿದೆ.

ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಒಕ್ಕೂಟದ ಪ್ರತಿಭಟನಾಕಾರರು, ಉನ್ನತ ಹುದ್ದೆಗೆ ಯೂನುಸ್ ಹೆಸರನ್ನು ಪ್ರಸ್ತಾಪಿಸಿದ್ದರು. ‘ಸೇನಾ ಮುಖ್ಯಸ್ಥರ ನೇತೃತ್ವದಲ್ಲಿ ನಾವು ಮಧ್ಯಂತರ ಸರ್ಕಾರ ರಚಿಸಲು ನಿರ್ಧಾರ ಮಾಡಿದ್ದೇವೆ, ಅದರಲ್ಲಿ ಅಂತರರಾಷ್ಟ್ರೀಯವಾಗಿ ಮನ್ನಣೆ ಹೊಂದಿರುವ ನೊಬೆಲ್ ಪ್ರಶಸ್ತಿ ವಿಜೇತ ಡಾ ಮೊಹಮ್ಮದ್ ಯೂನುಸ್ ಮುಖ್ಯ ಸಲಹೆಗಾರರಾಗಿರುತ್ತಾರೆ’ ಎಂದು ಸಂಘಟನೆ ತಿಳಿಸಿತ್ತು.

ವಿದ್ಯಾರ್ಥಿಗಳು ಬಹಳಷ್ಟು ಪ್ರತಿಭಟನೆ ಮಾಡಿದ್ದಾರೆ. ಇದರಿಂದ ಅವರಿಗೆ ಫಲ ಸಿಗಬೇಕಿದೆ. ಜನ ಕೂಡ ಅವರಿಗಾಗಿ ಕೆಲ ತ್ಯಾಗಗಳನ್ನು ಮಾಡಬೇಕಿದೆ ಎಂದು ಯೂನುಸ್ ಹೇಳಿದ್ದಾರೆ.

ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ: 84 ವರ್ಷದ ಮೊಹಮ್ಮದ್ ಯೂನುಸ್, ಖ್ಯಾತ ಅರ್ಥಶಾಸ್ತ್ರಜ್ಞರು. ತಮ್ಮ ಮೈಕ್ರೊಫೈನಾನ್ಸ್ ಪರಿಕಲ್ಪನೆ ಮೂಲಕ ಲಕ್ಷಾಂತರ ಜನರನ್ನು ಬಡತನದಿಂದ ಮೇಲೆತ್ತಿದ ಶ್ರೇಯ ಅವರದ್ದಾಗಿದೆ. ಆದರೆ, ಇದರಿಂದಾಗಿ ಅವರು ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ದ್ವೇಷ ಕಟ್ಟಿಕೊಂಡಿದ್ದರು. ಬಡವರ ರಕ್ತ ಹೀರುತ್ತಿದ್ದಾರೆ ಎಂದು ಯೂನುಸ್ ವಿರುದ್ಧ ಹಸೀನಾ ಕಿಡಿಕಾರಿದ್ದರು.

ಹಸೀನಾ ಸರ್ಕಾರವು ಯೂನುಸ್ ವಿರುದ್ಧ 190ಕ್ಕೂ ಅಧಿಕ ಪ್ರಕರಣ ದಾಖಲಿಸಿತ್ತು. ಬಾಂಗ್ಲಾದೇಶ ಕಾರ್ಮಿಕರ ಕಾನೂನು ಉಲ್ಲಂಘಿಸಿದ ಆರೋಪದಡಿ ಅವರು ತಪ್ಪಿತಸ್ಥರೆಂದು ಜನವರಿಯಲ್ಲಿ ತೀರ್ಪು ಬಂದಿತ್ತು. ಸದ್ಯ, ಯುನುಸ್‌ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

P

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version