ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ವಿದೇಶ

• 1 ನಿಮಿಷದ ಓದು

ಮೆಟಾ ಕಂಪನಿಯಲ್ಲಿ 15,000 ಉದ್ಯೋಗಕ್ಕೆ ಕೋಕ್‌ – AI ಕಾರಣ ಅಂತಿದ್ದಾರೆ ಮಾಲೀಕರು

ನ್ಯೂಯಾರ್ಕ್: ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’ (Meta), ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಉದ್ಯೋಗ ಕಡಿತಕ್ಕೆ (Lay off) ಮುಂದಾಗಿದೆ.

ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನದ ಮೇಲೆ ಭಾರಿ ಪ್ರಮಾಣದ ಹೂಡಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ವೆಚ್ಚವನ್ನು ಸರಿದೂಗಿಸಲು ಸುಮಾರು 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಕಂಪನಿ ಯೋಚಿಸುತ್ತಿದೆ.

AI ಮೇಲೆ ಭಾರೀ ಹೂಡಿಕೆ
ವರದಿಗಳ ಪ್ರಕಾರ, ಮಾರ್ಕ್ ಜುಕರ್‌ಬರ್ಗ್ ನೇತೃತ್ವದ ಮೆಟಾ ಕಂಪನಿಯು 2028ರ ವೇಳೆಗೆ AI ಮೂಲಸೌಕರ್ಯಗಳಿಗಾಗಿ ಸುಮಾರು 600 ಶತಕೋಟಿ ಡಾಲರ್ ಹೂಡಿಕೆ ಮಾಡಲು ಉದ್ದೇಶಿಸಿದೆ. ಸೂಪರ್ ಇಂಟೆಲಿಜೆನ್ಸ್ ಲ್ಯಾಬ್ಸ್ (MSL) ಸ್ಥಾಪನೆ, ಡೇಟಾ ಸೆಂಟರ್‌ಗಳ ನಿರ್ಮಾಣ ಮತ್ತು ಹೊಸ AI ಸ್ಟಾರ್ಟ್‌ಅಪ್‌ಗಳ ಖರೀದಿಗೆ ಕಂಪನಿ ಹಣವನ್ನು ಧಾರೆ ಎರೆಯುತ್ತಿದೆ. ಈ ಭಾರಿ ವೆಚ್ಚವನ್ನು ಸರಿದೂಗಿಸಲು ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಶೇ. 20ರಷ್ಟು ಉದ್ಯೋಗಿಗಳಿಗೆ ಸಂಕಷ್ಟ: ಪ್ರಸ್ತುತ ಮೆಟಾ ಕಂಪನಿಯಲ್ಲಿ ಸುಮಾರು 79,000 ಉದ್ಯೋಗಿಗಳಿದ್ದು, ಈ ಪೈಕಿ ಶೇ. 20ರಷ್ಟು ಅಂದರೆ ಸುಮಾರು 15,000ಕ್ಕೂ ಹೆಚ್ಚು ಜನರನ್ನು ಮನೆಗೆ ಕಳುಹಿಸುವ ಸಾಧ್ಯತೆಯಿದೆ. ಇದು ಕಂಪನಿಯ 2022-23ರ “ಕಾರ್ಯಕ್ಷಮತೆಯ ವರ್ಷ” (Year of Efficiency) ಅವಧಿಯಲ್ಲಿ ನಡೆದ 11,000 ಉದ್ಯೋಗಿಗಳ ವಜಾಕ್ಕಿಂತಲೂ ದೊಡ್ಡದಾಗಿರಲಿದೆ.

ರಿಯಾಲಿಟಿ ಲ್ಯಾಬ್ಸ್ ಮೇಲೂ ಪರಿಣಾಮ: ಕಂಪನಿಯು ಈ ಹಿಂದೆ ಮೆಟಾವರ್ಸ್ (Metaverse) ಮೇಲೆ ಹೆಚ್ಚಿನ ಗಮನಹರಿಸಿತ್ತು. ಆದರೆ ಈಗ ಆದ್ಯತೆ ಬದಲಾಗಿದ್ದು, ‘ರಿಯಾಲಿಟಿ ಲ್ಯಾಬ್ಸ್’ ವಿಭಾಗದಲ್ಲೂ ಉದ್ಯೋಗ ಕಡಿತದ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎನ್ನಲಾಗಿದೆ. ವರ್ಚುವಲ್ ರಿಯಾಲಿಟಿಗಿಂತ AI ಚಾಲಿತ ವೇರಬಲ್ಸ್ (Wearables) ಮತ್ತು ಮೊಬೈಲ್ ಫೀಚರ್‌ಗಳಿಗೆ ಕಂಪನಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ.

ತಜ್ಞರ ಅಭಿಪ್ರಾಯ: ತಂತ್ರಜ್ಞಾನ ಲೋಕದಲ್ಲಿ AI ಕ್ರಾಂತಿ ನಡೆಯುತ್ತಿರುವಾಗ, ಮಾನವ ಶಕ್ತಿಯ ಅವಶ್ಯಕತೆ ಕಡಿಮೆಯಾಗುತ್ತಿದೆ ಎಂದು ಜುಕರ್‌ಬರ್ಗ್ ಈ ಹಿಂದೆಯೇ ಸುಳಿವು ನೀಡಿದ್ದರು. “ಹಿಂದೆ ದೊಡ್ಡ ತಂಡಗಳು ಬೇಕಾಗಿದ್ದ ಕೆಲಸಗಳನ್ನು ಈಗ ಒಬ್ಬ ಪ್ರದಕ್ಷ ನೌಕರನು AI ಸಹಾಯದಿಂದ ಮಾಡಲು ಸಾಧ್ಯವಿದೆ” ಎಂದು ಅವರು ಹೇಳಿದ್ದರು.

ಅಮೆಜಾನ್, ಆಕ್ಸೆಂಚರ್ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ದೈತ್ಯ ಕಂಪನಿಗಳು ಕೂಡ AI ಹೂಡಿಕೆಯ ಭಾಗವಾಗಿ ಉದ್ಯೋಗ ಕಡಿತದ ಹಾದಿ ಹಿಡಿದಿವೆ. ಮೆಟಾದ ಈ ನಿರ್ಧಾರವು ಐಟಿ ವಲಯದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಸಿದೆ

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು