ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಂಬ ಕೊಚ್ಚಿಕೊಳ್ಳುತ್ತಿಲ್ಲ, 8 ಯುದ್ಧಗಳನ್ನು ನಿಲ್ಲಿಸಿದ್ದೇನೆ: ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಗೂ ಮುನ್ನ ಡೊನಾಲ್ಡ್ ಟ್ರಂಪ್ ಪ್ರತಿಪಾದನೆ

P

Peepal Media • ವಿದೇಶ

• 1 ನಿಮಿಷದ ಓದು

ಜಂಬ ಕೊಚ್ಚಿಕೊಳ್ಳುತ್ತಿಲ್ಲ, 8 ಯುದ್ಧಗಳನ್ನು ನಿಲ್ಲಿಸಿದ್ದೇನೆ: ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಗೂ ಮುನ್ನ ಡೊನಾಲ್ಡ್ ಟ್ರಂಪ್ ಪ್ರತಿಪಾದನೆ

ನಾರ್ವೇಜಿಯನ್ ನೊಬೆಲ್ ಸಮಿತಿಯು ಶುಕ್ರವಾರ 2026 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಿರುವ ಹೊತ್ತಿನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ಈ ಪ್ರಶಸ್ತಿ ಸಿಗಬೇಕೆಂದು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಬುಧವಾರ ಮಧ್ಯಾಹ್ನ ಶ್ವೇತಭವನದ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಜಾಗತಿಕ ಮಟ್ಟದಲ್ಲಿ ಬರೋಬ್ಬರಿ ಎಂಟು ಯುದ್ಧಗಳನ್ನು ಬಗೆಹರಿಸಿದ್ದು, ತಮಗಿಂತ ಹೆಚ್ಚು ಅರ್ಹರು ಬೇರಾರೂ ಇಲ್ಲ ಎಂದಿದ್ದಾರೆ.

“ನಾನು ಬೇರೆ ಯಾರೂ ಮಾಡಿರದಂತಹ ಮಹತ್ವದ ಕೆಲಸಗಳನ್ನು ಮಾಡಿದ್ದೇನೆ. ನಾನೇನು ಜಂಬ ಕೊಚ್ಚಿಕೊಳ್ಳುತ್ತಿಲ್ಲ, ವಾಸ್ತವ ಸಂಗತಿಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ. ಈ ಹಿಂದೆ ಯಾವುದೇ ಅಧ್ಯಕ್ಷರು ಇಷ್ಟೊಂದು ಯುದ್ಧಗಳನ್ನು ನಿಲ್ಲಿಸಿರಲು ಸಾಧ್ಯವಿಲ್ಲ, ಆದರೆ ನಾನು ಎಂಟು ಯುದ್ಧಗಳನ್ನು ಇತ್ಯರ್ಥಪಡಿಸಿದ್ದೇನೆ. ನನ್ನಂತಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡದಿರುವ ಹಣೆಪಟ್ಟಿ ಆ ಸಮಿತಿಗಿದೆ. ಆದರೆ ನನಗೆ ಈ ಬಾರಿ ಪ್ರಶಸ್ತಿ ನೀಡದಿದ್ದರೆ ಅದು ನೊಬೆಲ್ ಸಮಿತಿಗೆ ಆಗುವ ದೊಡ್ಡ ಅವಮಾನ” ಎಂದು ಟ್ರಂಪ್ ಹೇಳಿದ್ದಾರೆ.

ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗಿಂತ ತಾವೇ ಹೆಚ್ಚು ಅರ್ಹರೆಂದು ಹೇಳಿದ ಅವರು, 2025 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಗೆದ್ದಿದ್ದ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾಡೊ ಜನವರಿಯಲ್ಲಿ ತಮ್ಮನ್ನು ಭೇಟಿಯಾದಾಗ, “ಇತಿಹಾಸದಲ್ಲಿ ಟ್ರಂಪ್‌ಗಿಂತ ಹೆಚ್ಚಿನ ಅರ್ಹರು ಯಾರೂ ಇಲ್ಲ” ಎಂದು ಹೇಳಿ ತಮ್ಮ ಪದಕವನ್ನು ತಮಗೆ ಹಸ್ತಾಂತರಿಸಿದ್ದನ್ನು ಸ್ಮರಿಸಿಕೊಂಡರು.

ಇಸ್ರೇಲ್-ಹಮಾಸ್, ಇಸ್ರೇಲ್-ಇರಾನ್, ಭಾರತ-ಪಾಕಿಸ್ತಾನ, ಸರ್ಬಿಯಾ-ಕೊಸೊವೊ, ಈಜಿಪ್ಟ್-ಇಥಿಯೋಪಿಯಾ, ರುವಾಂಡಾ-ಕಾಂಗೋ, ಅರ್ಮೇನಿಯಾ-ಅಜೆರ್ಬೈಜಾನ್ ಹಾಗೂ ಕಾಂಬೋಡಿಯಾ-ಥೈಲ್ಯಾಂಡ್ ನಡುವಿನ ಸಂಘರ್ಷಗಳನ್ನು ತಾವು ತಡೆದಿದ್ದಾಗಿ ಟ್ರಂಪ್ ಈ ಹಿಂದೆ ಹೇಳಿಕೊಂಡಿದ್ದರು. ಆದರೆ, ‘ಆಪರೇಷನ್ ಸಿಂಧೂರ್’ ನಂತರದ ಕದನ ವಿರಾಮದಲ್ಲಿ ಅಮೆರಿಕದ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಇರಲಿಲ್ಲ, ಅದು ನೇರವಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ತೀರ್ಮಾನವಾಗಿತ್ತು ಎಂದು ಭಾರತದ ವಿದೇಶಾಂಗ ಸಚಿವಾಲಯ ಈಗಾಗಲೇ ಟ್ರಂಪ್ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿತ್ತು.

ಇದಲ್ಲದೆ, ಕಳೆದ ಎಂಟು ತಿಂಗಳುಗಳಿಂದ ನಡೆಯುತ್ತಿರುವ ಯುಎಸ್-ಇರಾನ್ ಯುದ್ಧ ಮತ್ತು ಮಾಧ್ಯಮಗಳ ಮೇಲಿನ ವಾಗ್ದಾಳಿಯ ಕಾರಣದಿಂದಾಗಿ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವ ಸಾಧ್ಯತೆಗಳು ತೀರಾ ಕಡಿಮೆಯಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಉಕ್ರೇನ್ ಮಕ್ಕಳ ರಕ್ಷಣಾ ಹೋರಾಟಗಾರ ಮೈಕೋಲಾ ಕುಲೆಬಾ, ‘ಸೇವ್ ದಿ ಚಿಲ್ಡ್ರನ್’ ಸಂಸ್ಥೆ ಹಾಗೂ ಸುಡಾನ್‌ನ ತುರ್ತು ಪರಿಹಾರ ಜಾಲ (ERR) ಪ್ರಸ್ತುತ ಪ್ರಶಸ್ತಿ ರೇಸ್‌ನಲ್ಲಿ ಮುಂಚೂಣಿಯಲ್ಲಿವೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

P

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version