ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬ್ರೆಜಿಲ್‌: ವಿಮಾನ ಪತನ 61 ಸಾವು

P

Peepal Media • ವಿದೇಶ

• 1 ನಿಮಿಷದ ಓದು

ಬ್ರೆಜಿಲ್‌: ವಿಮಾನ ಪತನ 61 ಸಾವು

ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ನಡೆದ ವಿಮಾನ ಅಪಘಾತದಲ್ಲಿ 61 ಜನರು ಸಾವನ್ನಪ್ಪಿದ್ದಾರೆ.

ಅವಳಿ-ಎಂಜಿನ್ ಟರ್ಬೊಪ್ರಾಪ್ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊ ನಗರದ ಗೌರುಲ್ಹೋಸ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ ಎಂದು ವೋಪಾಸ್ ಏರ್‌ಲೈನ್ಸ್ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ ವಿಮಾನ ಗಾಳಿಯಲ್ಲಿ ಗಿರಗಿರನೆ ತಿರುಗಿ ಕೆಳಗೆ ಬೀಳುತ್ತಿರುವುದು ಕಂಡು ಬಂದಿದೆ.

ಅಪಘಾತಕ್ಕೀಡಾದ ಈ ಎಟಿಆರ್ 72-500 ವಿಮಾನದಲ್ಲಿ 57 ಪ್ರಯಾಣಿಕರು ಮತ್ತು 4 ಸಿಬ್ಬಂದಿ ಇದ್ದರು. ಅವರಲ್ಲಿ ಒಬ್ಬರೂ ಬದುಕುಳಿದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ವಿನ್‌ಹೆಡೊ ಪ್ರದೇಶದಲ್ಲಿ ವಿಮಾನವು ಜನನಿಬಿಡ ಪ್ರದೇಶದ ಮಧ್ಯದಲ್ಲಿ ಪತನಗೊಂಡಿತು. ಸ್ಥಳೀಯ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಮನೆಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ಹಲವು ಮನೆಗಳಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ವಿಮಾನ ಬಿದ್ದ ನಂತರ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.

ಫ್ಲೈಟ್ ರೆಕಾರ್ಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರೆಂಚ್-ಇಟಾಲಿಯನ್ ವಿಮಾನ ತಯಾರಕ ಸಂಸ್ಥೆ ಎಟಿಆರ್ ತನಿಖೆಗೆ ಸಹಕರಿಸುವುದಾಗಿ ಹೇಳಿದೆ.

P

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version