ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

PPeepal Media

Peepal Media ವಿದೇಶ

• 1 ನಿಮಿಷದ ಓದು

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದ ಪ್ರಮುಖ ನಗರಗಳು ರಣರಂಗವಾಗಿ ಮಾರ್ಪಟ್ಟಿವೆ. ಶಾಲೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಶಿಥಿಲಗೊಂಡಿರುವ ತರಗತಿ ಕೊಠಡಿಗಳನ್ನು ತಕ್ಷಣವೇ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ‘ಬ್ಲಾಕ್ ಟ್ಯೂಸ್‌ಡೇ’ (ಕಪ್ಪು ಮಂಗಳವಾರ) ಹೆಸರಿನಲ್ಲಿ ದೇಶವ್ಯಾಪಿ ಕರೆ ನೀಡಿದ್ದ ಬೃಹತ್ ಪ್ರತಿಭಟನೆಯು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ದೊಡ್ಡ ಪ್ರತಿಭಟನಾ ದಿನವಾಗಿ ದಾಖಲಾಗಿದೆ. ನೂರಾರು ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳೇ ಬೀಗ ಜಡಿದು ದಿಗ್ಬಂಧನ ವಿಧಿಸಿದ್ದಾರೆ.

ಮಾರ್ಸಿಲ್ಲೆ, ನಾಂಟ್ಸ್ ಹಾಗೂ ಲಿಯಾನ್ ನಗರಗಳಲ್ಲಿ ಶಾಂತಿಯುತವಾಗಿ ಆರಂಭವಾದ ರ್ಯಾಲಿಗಳು ಮಧ್ಯಾಹ್ನದ ವೇಳೆಗೆ ರಾಜಧಾನಿ ಪ್ಯಾರಿಸ್‌ನಲ್ಲಿ ದೈತ್ಯ ಪ್ರದರ್ಶನವಾಗಿ ರೂಪಾಂತರಗೊಂಡವು. ಹೊಗೆ ಬಾಂಬುಗಳನ್ನು ಸಿಡಿಸಿದ ಯುವ ಸಮೂಹ, “ನಮ್ಮ ಪಠ್ಯಪುಸ್ತಕಗಳ ಅಡಿಯಲ್ಲಿ ಸಿಡಿಯುವ ಆಕ್ರೋಶವಿದೆ”, “ರಾಜಕಾರಣಿಗಳು ಎಲ್ಲಿದ್ದಾರೆ? ನಾವಿಲ್ಲಿ ಜೀವಂತವಾಗಿದ್ದೇವೆ ಎಂಬುದು ಅವರಿಗೇನಾದರೂ ತಿಳಿದಿದೆಯೇ?” ಎಂದು ಬರೆದ ಬ್ಯಾನರ್‌ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿತು.

ಪ್ಯಾರಿಸ್‌ನ ಹಿಂದುಳಿದ ಉಪನಗರಗಳಲ್ಲಿ ಎರಡು ವಾರಗಳ ಹಿಂದೆ ಕಿಡಿಯಾಗಿ ಶುರುವಾಗಿದ್ದ ಈ ಹೋರಾಟವೀಗ ದೇಶಾದ್ಯಂತ ವ್ಯಾಪಿಸಿದೆ. ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಸರ್ಕಾರ ರಕ್ಷಣಾ ಪಡೆಗಳನ್ನು (Riot Police) ಅಖಾಡಕ್ಕಿಳಿಸಿದ್ದು, ಉತ್ತರ ಫ್ರಾನ್ಸ್‌ನಲ್ಲಿ ನಡೆದ ಸಂಘರ್ಷದಲ್ಲಿ ಪೊಲೀಸ್ ದೌರ್ಜನ್ಯಕ್ಕೆ ಸಿಲುಕಿ ಒಬ್ಬ ಅಪ್ರಾಪ್ತ ವಿದ್ಯಾರ್ಥಿಯ ಕೈ ತುಂಡಾಗಿದೆ.

ವಿದ್ಯಾರ್ಥಿ ಸಂಘಟನೆಯ ವರದಿಯ ಪ್ರಕಾರ, ಪ್ರತಿಭಟನೆಯ ಕಾವು ಹೆಚ್ಚಾದ ಹಿನ್ನೆಲೆಯಲ್ಲಿ ದೇಶಾದ್ಯಂತ 1,800ಕ್ಕೂ ಹೆಚ್ಚು ಪ್ರೌಢಶಾಲೆಗಳು ಬಾಗಿಲು ಮುಚ್ಚಿವೆ. ಕೆಲವು ಶಿಕ್ಷಣ ಇಲಾಖೆಗಳು ತರಗತಿಗಳನ್ನು ಆನ್‌ಲೈನ್‌ಗೆ ಬದಲಾಯಿಸಲು ಪ್ರಯತ್ನಿಸಿದರೂ ಪರಿಸ್ಥಿತಿ ಕೈಮೀರಿದೆ. ಹೋರಾಟದಲ್ಲಿ ಭಾಗವಹಿಸಿದ ಸ್ಟ್ರಾಸ್‌ಬರ್ಗ್ ನಗರದ ಹೈಸ್ಕೂಲ್ ವಿದ್ಯಾರ್ಥಿ ಹ್ಯೂಗೋ ವೆಟ್ಜೆಲ್ ಪ್ರತಿಕ್ರಿಯಿಸಿ, “ಹಿಂಸೆಯೇ ಸರ್ಕಾರದ ಉತ್ತರವಾಗಿದ್ದರೆ, ಇಲ್ಲಿ ಪ್ರಜಾಪ್ರಭುತ್ವ ಸತ್ತುಹೋಗಿದೆ ಎಂದೇ ಅರ್ಥ.

ಆಳುವ ವರ್ಗಕ್ಕೂ ಸಾಮಾನ್ಯ ವಿದ್ಯಾರ್ಥಿಗಳಿಗೂ ನಡುವೆ ಬೆಟ್ಟದಷ್ಟು ಕಂದಕ ನಿರ್ಮಾಣವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾನೆ. ಆಡಳಿತದ ದಬ್ಬಾಳಿಕೆಯಿಂದ ಇದುವರೆಗೆ ಬರೋಬ್ಬರಿ 6,000 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಲ್ಲಿ ಬಹುತೇಕರು ಅಪ್ರಾಪ್ತರಾಗಿದ್ದಾರೆ. ಸಂಘರ್ಷದಲ್ಲಿ 715 ಪೊಲೀಸರು ಹಾಗೂ 215ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿದ್ಯಾರ್ಥಿ ಸಮರಕ್ಕೆ ಪ್ರಮುಖ ಕಾರ್ಮಿಕ ಸಂಘಟನೆಗಳು ಹಾಗೂ ವಿಶ್ವವಿದ್ಯಾಲಯದ ಯುವಜನರು ಅಧಿಕೃತ ಬೆಂಬಲ ಘೋಷಿಸಿ ಬೀದಿಗಿಳಿದಿದ್ದಾರೆ. ಫ್ರಾನ್ಸ್‌ನ ಪ್ರಭಾವಿ ಸಿಜಿಟಿ (CGT) ಕಾರ್ಮಿಕ ಒಕ್ಕೂಟವು ದೇಶಾದ್ಯಂತ ಕೆಲಸ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗಿಯಾಗುವಂತೆ ಕರೆ ನೀಡಿದೆ. ಎಡಪಂಥೀಯ ‘ಫ್ರಾನ್ಸ್ ಅನ್‌ಬೌಂಡ್’ (LFI) ಪಕ್ಷವು ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದೆ ಎಂದು ಇಮ್ಯಾನ್ಯುಯೆಲ್ ಮ್ಯಾಕ್ರನ್ ಸರ್ಕಾರ ಆರೋಪಿಸಿದೆಯಾದರೂ, ವಿಪಕ್ಷಗಳು ಸರ್ಕಾರದ ದಮನಕಾರ ನೀತಿಯನ್ನು ಕಟುವಾಗಿ ಖಂಡಿಸಿವೆ.

ಪ್ರತಿಭಟನೆ ಕಾವೇರುತ್ತಿದ್ದಂತೆ ಕೊನೆಗೂ ಮಣಿದ ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು, ಗೈರುಹಾಜರಾಗುವ ಶಿಕ್ಷಕರ ಜಾಗಕ್ಕೆ ತಾತ್ಕಾಲಿಕ ಸಿಬ್ಬಂದಿ ನೇಮಕ, ಬೆಳಿಗ್ಗೆ 8ರಿಂದ ಸಂಜೆ 6ರವರೆಗಿನ ಶಾಲಾ ಸಮಯದ ಕಡಿತ ಮತ್ತು ಶಿಥಿಲ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ, ಸಾಲದ ಹೊರೆ ಮತ್ತು ಹಣದುಬ್ಬರದಿಂದ ಕಂಗೆಟ್ಟಿರುವ ಮ್ಯಾಕ್ರನ್ ಸರ್ಕಾರದ ಆರ್ಥಿಕ ನೀತಿಗಳೇ ಈ ಬಿಕ್ಕಟ್ಟಿಗೆ ಮೂಲ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು