ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತಕ್ಕೆ ಒಂದು ತಿಂಗಳ ಕಾಲ ರಷ್ಯಾದಿಂದ ತೈಲ ತರಿಸಿಕೊಳ್ಳಲು ʼಅವಕಾಶʼ ನೀಡಿದ ಅಮೇರಿಕಾ

PPeepal Media

Peepal Media ವಿದೇಶ

• 1 ನಿಮಿಷದ ಓದು

ಭಾರತಕ್ಕೆ ಒಂದು ತಿಂಗಳ ಕಾಲ ರಷ್ಯಾದಿಂದ ತೈಲ ತರಿಸಿಕೊಳ್ಳಲು ʼಅವಕಾಶʼ ನೀಡಿದ ಅಮೇರಿಕಾ

ಇರಾನ್ ಜೊತೆಗಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ತೈಲ ಸಂಸ್ಕರಣಾ ಘಟಕಗಳು ರಷ್ಯಾದ ತೈಲವನ್ನು ಖರೀದಿಸಲು ಅನುವು ಮಾಡಿಕೊಡುವಂತೆ ಅಮೆರಿಕವು 30 ದಿನಗಳ ಕಾಲ ತಾತ್ಕಾಲಿಕ ವಿನಾಯಿತಿಯನ್ನು (Waiver) ಘೋಷಿಸಿದೆ.

“ಅಧ್ಯಕ್ಷ ಟ್ರಂಪ್ ಅವರ ಇಂಧನ ಕಾರ್ಯಸೂಚಿಯ ಫಲವಾಗಿ ತೈಲ ಮತ್ತು ಅನಿಲ ಉತ್ಪಾದನೆಯು ದಾಖಲೆ ಮಟ್ಟವನ್ನು ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಪೂರೈಕೆ ನಿರಂತರವಾಗಿರಲು ಅನುವಾಗುವಂತೆ, ಭಾರತೀಯ ರಿಫೈನರಿಗಳು ರಷ್ಯಾದ ತೈಲವನ್ನು ಖರೀದಿಸಲು ಖಜಾನೆ ಇಲಾಖೆಯು 30 ದಿನಗಳ ತಾತ್ಕಾಲಿಕ ವಿನಾಯಿತಿಯನ್ನು ನೀಡುತ್ತಿದೆ” ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಗುರುವಾರ ತಿಳಿಸಿದ್ದಾರೆ. ಇದು “ಉದ್ದೇಶಪೂರ್ವಕ ಅಲ್ಪಾವಧಿಯ ಕ್ರಮ”ವಾಗಿದ್ದು, ಈಗಾಗಲೇ ಸಮುದ್ರದಲ್ಲಿ ಬಾಕಿಯಾಗಿರುವ ತೈಲದ ವಹಿವಾಟಿಗೆ ಮಾತ್ರ ಅನುಮತಿ ನೀಡುವುದರಿಂದ ರಷ್ಯಾ ಸರ್ಕಾರಕ್ಕೆ ಇದರಿಂದ ದೊಡ್ಡ ಆರ್ಥಿಕ ಲಾಭವೇನೂ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಭಾರತವು ಅಮೆರಿಕದ ಅತ್ಯಗತ್ಯ ಪಾಲುದಾರ ದೇಶವಾಗಿದ್ದು, ನವದೆಹಲಿಯು ಅಮೆರಿಕದ ತೈಲ ಖರೀದಿಯನ್ನು ಹೆಚ್ಚಿಸಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಇರಾನ್ ಜಾಗತಿಕ ಇಂಧನ ವ್ಯವಸ್ಥೆಯನ್ನು ಒತ್ತೆ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ, ಈ ತಾತ್ಕಾಲಿಕ ಕ್ರಮವು ಒತ್ತಡವನ್ನು ಕಡಿಮೆ ಮಾಡುತ್ತದೆ” ಎಂದು ಬೆಸೆಂಟ್ ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಕಾರಣಕ್ಕಾಗಿ ಈ ಹಿಂದೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಶೇ. 25 ರಷ್ಟು ದಂಡನಾತ್ಮಕ ಸುಂಕವನ್ನು (Punitive tariffs) ಹೇರಿದ್ದರು.

ಕಳೆದ ತಿಂಗಳು ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದವು. ರಷ್ಯಾದಿಂದ ಇಂಧನ ಆಮದು ನಿಲ್ಲಿಸಿ ಅಮೆರಿಕದ ಇಂಧನ ಉತ್ಪನ್ನಗಳ ಖರೀದಿಯನ್ನು ಹೆಚ್ಚಿಸುವುದಾಗಿ ಭಾರತ ನೀಡಿದ ಭರವಸೆಯ ಮೇರೆಗೆ ಟ್ರಂಪ್ ಅವರು ಶೇ. 25 ರಷ್ಟು ದಂಡನಾತ್ಮಕ ಸುಂಕವನ್ನು ತೆಗೆದುಹಾಕಿದ್ದರು. ಈಗಿನ ಹೊಸ ಆದೇಶದ ಪ್ರಕಾರ, ಮಾರ್ಚ್ 5, 2026 ರ ಮೊದಲು ಹಡಗುಗಳಿಗೆ ಲೋಡ್ ಮಾಡಲಾದ ರಷ್ಯಾದ ತೈಲವನ್ನು ಏಪ್ರಿಲ್ 4, 2026 ರವರೆಗೆ ಭಾರತದ ಬಂದರುಗಳಲ್ಲಿ ಇಳಿಸಿಕೊಳ್ಳಲು ಮತ್ತು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಖಜಾನೆ ಇಲಾಖೆಯು ನೀಡಿರುವ ಈ ಸಾಮಾನ್ಯ ಪರವಾನಗಿಯು ಇರಾನ್ ಅಥವಾ ಇರಾನ್ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆ ಅಥವಾ ವಹಿವಾಟಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು