ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕದನ ವಿರಾಮಕ್ಕೆ ಒಪ್ಪಿದ ಇರಾನ್, ಇಸ್ರೇಲ್

P

Peepal Media • ವಿದೇಶ

• 1 ನಿಮಿಷದ ಓದು

ಕದನ ವಿರಾಮಕ್ಕೆ ಒಪ್ಪಿದ ಇರಾನ್, ಇಸ್ರೇಲ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದ್ದ 12 ದಿನಗಳ ಯುದ್ಧವನ್ನು ಇಸ್ರೇಲ್ ಮತ್ತು ಇರಾನ್ ಕೊನೆಗೊಳಿಸಿವೆ. ಇಸ್ರೇಲ್‌ನೊಂದಿಗಿನ ಯುದ್ಧದಲ್ಲಿ ಕದನ ವಿರಾಮ ಪ್ರಾರಂಭವಾಗಿದೆ ಎಂದು ಇರಾನ್‌ನ ಅಧಿಕೃತ ಮಾಧ್ಯಮ ಮಂಗಳವಾರ ಪ್ರಕಟಿಸಿದೆ.

ಇರಾನ್‌ನಿಂದ ಹೊಸ ಕ್ಷಿಪಣಿ ದಾಳಿಯ ಬಗ್ಗೆ ಇಸ್ರೇಲ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಇರಾನ್‌ನಿಂದ ಈ ಘೋಷಣೆ ಬಂದಿದೆ. ಕೊನೆಯ ಕ್ಷಣದವರೆಗೂ ತಮ್ಮ ದೇಶಕ್ಕಾಗಿ ಹೋರಾಡಿದ್ದಕ್ಕಾಗಿ ಟೆಹ್ರಾನ್ ಸಶಸ್ತ್ರ ಪಡೆಗಳಿಗೆ ಧನ್ಯವಾದ ಹೇಳಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಸಂದರ್ಶನವೊಂದರಲ್ಲಿ ಹೇಳಿದರು.

“ನಮ್ಮ ಪ್ರಬಲ ಸಶಸ್ತ್ರ ಪಡೆಗಳ ಮಿಲಿಟರಿ ಕಾರ್ಯಾಚರಣೆಗಳು ಇಸ್ರೇಲ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಬೆಳಿಗ್ಗೆ 4:00 ಗಂಟೆಯವರೆಗೆ ಮುಂದುವರೆದವು. ನಮ್ಮ ಪ್ರೀತಿಯ ದೇಶ ಮತ್ತು ಜನರನ್ನು ಕೊನೆಯ ರಕ್ತದ ಹನಿಯವರೆಗೆ ರಕ್ಷಿಸಲು ಸಿದ್ಧರಾಗಿರುವ ಮತ್ತು ಶತ್ರುಗಳ ದಾಳಿಗೆ ಕೊನೆಯ ಕ್ಷಣದವರೆಗೆ ಪ್ರತಿಕ್ರಿಯಿಸಿದ ನಮ್ಮ ಸಶಸ್ತ್ರ ಪಡೆಗಳಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಅವರು ಹೇಳಿದರು.

ಇರಾನ್‌ನೊಂದಿಗೆ ಕದನ ವಿರಾಮಕ್ಕಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಪ್ರಸ್ತಾಪವನ್ನು ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಧ್ಯಕ್ಷ ನೆತನ್ಯಾಹು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಟ್ರಂಪ್ ಮಧ್ಯಸ್ತಿಕೆಯೊಂದಿಗೆ ಇರಾನ್‌ ಜೊತೆಗಿನ ದ್ವಿಪಕ್ಷೀಯ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅವರು ಹೇಳಿದರು.

ಮಂಗಳವಾರ ಮುಂಜಾನೆ ಟೆಹ್ರಾನ್ ಇಸ್ರೇಲ್ ಮೇಲೆ ತನ್ನ ಕೊನೆಯ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದೆ ಎಂದು ತಿಳಿದಿದೆ. ನಂತರ, ಇಸ್ರೇಲ್ ಕೂಡ ಇರಾನ್ ಮೇಲೆ ವಾಯುದಾಳಿ ನಡೆಸಿದ ನಂತರ, ಎರಡೂ ಕಡೆಯವರು ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳುವುದಾಗಿ ಘೋಷಿಸಿದರು.

ಇರಾನ್ ದಾಳಿಗೆ ನಾಲ್ವರು ಇಸ್ರೇಲಿಗಳ ಸಾವು

ಇಸ್ರೇಲ್: ಇಸ್ರೇಲ್‌ನ ಬೀರ್‌ಶೆಬಾದಲ್ಲಿರುವ ವಸತಿ ಕಟ್ಟಡದ ಮೇಲೆ ಇರಾನ್ ಕ್ಷಿಪಣಿಗಳನ್ನು ಹಾರಿಸಿದೆ. ಮಂಗಳವಾರ ಬೆಳಿಗ್ಗೆ 4 ಗಂಟೆಗೆ ಈ ದಾಳಿ ನಡೆದಿದ್ದು, ಕಟ್ಟಡದ ನಾಲ್ವರು ನಿವಾಸಿಗಳು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಇಸ್ರೇಲ್ ಮಾಧ್ಯಮಗಳು ಇದನ್ನು ವರದಿ ಮಾಡಿವೆ.

ಆದರೂ, ಟ್ರಂಪ್ ಈ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು ಗಮನಾರ್ಹ. ಇರಾನ್ ಆರು ಬಾರಿ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಹೇಳಿದೆ.

P

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version