ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಇರಾನ್‌ ಅಧ್ಯಕ್ಷರದು ಕೊಲೆಯೋ, ಅಪಘಾತದ ಸಾವೋ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಗಳ ಸುರಿಮಳೆ

PPeepal Media Desk

Peepal Media Desk ವಿದೇಶ

• 1 ನಿಮಿಷದ ಓದು

ಇರಾನ್‌ ಅಧ್ಯಕ್ಷರದು ಕೊಲೆಯೋ, ಅಪಘಾತದ ಸಾವೋ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಗಳ ಸುರಿಮಳೆ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಸಾವಿನ ಸುದ್ದಿ ಬೆಳಕಿಗೆ ಬರುತ್ತಿದೆ. ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ದಟ್ಟವಾದ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಪತನಗೊಂಡಿದೆ.

ಈ ಸುದ್ದಿಯನ್ನು ಇರಾನ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಇರಾನ್‌ನ ಪ್ರೆಸ್ ಟಿವಿ ಕೂಡ ಇಬ್ರಾಹಿಂ ರೈಸಿಯ ಸಾವನ್ನು ದೃಢಪಡಿಸಿದೆ. ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಗವರ್ನರ್ ಮಾಲೆಕ್ ರಹಮತಿ, ಪೂರ್ವ ಅಜೆರ್ಬೈಜಾನ್‌ನ ಶುಕ್ರವಾರದ ಪ್ರಾರ್ಥನಾ ಇಮಾಮ್ ಮೊಹಮ್ಮದ್ ಅಲಿ ಅಲೆ-ಹಶೆಮ್ ಮತ್ತು ಹಲವಾರು ಪ್ರಯಾಣಿಕರು ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ. ಇರಾನ್‌ನ ವಾಯುವ್ಯದಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಆಕಾಶದಲ್ಲಿ ಮಂಜು ಕವಿದಿತ್ತು

ರಾಯಿಟರ್ಸ್ ಪ್ರಕಾರ, ಇರಾನ್ ಅಧ್ಯಕ್ಷರು ಅಜರ್‌ಬೈಜಾನ್‌ನಿಂದ ಇರಾನ್‌ನ ರಾಜಧಾನಿ ಟೆಹ್ರಾನ್‌ಗೆ ಹೆಲಿಕಾಪ್ಟರ್‌ನಲ್ಲಿ ಹಿಂತಿರುಗುತ್ತಿದ್ದ ಸಂದರ್ಭ ತಬ್ರಿಜ್ ಬಳಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೆ ಬಲಿಯಾಯಿತು. ಅಪಘಾತದ ಸಮಯದಲ್ಲಿ ಪ್ರದೇಶದ ಹವಾಮಾನವು ತುಂಬಾ ಕೆಟ್ಟದಾಗಿತ್ತು. ಮಂಜು ಮತ್ತುಹಿಮದಿಂದಾಗಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿಯೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಪತ್ತೆಗೆ ಸಾಕಷ್ಟು ಸಮಯ ಹಿಡಿಯಿತು ಎಂದು ನಂಬಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹಲವು ವೀಡಿಯೋ ದೃಶ್ಯಾವಳಿಗಳು ಹೊರಬಿದ್ದಿದ್ದು,
ಸ್ಥಳವು ಹಲವೆಡೆ ನೀರಿನಿಂದ ತುಂಬಿದ್ದು, ದಟ್ಟ ಮಂಜು ಕವಿದಿರುವುದನ್ನು ಸ್ಪಷ್ಟವಾಗಿ ಕಾಣಬಹುದು.

ಎತ್ತರದ ಬೆಟ್ಟಗಳ ನಡುವೆ ಈ ದುರ್ಘಟನೆ ನಡೆದಿದೆ

ಮಾಧ್ಯಮ ವರದಿಗಳ ಪ್ರಕಾರ, ಹೆಲಿಕಾಪ್ಟರ್ ಪತನಗೊಂಡ ಸ್ಥಳದಲ್ಲಿ ಎತ್ತರದ ಬೆಟ್ಟಗಳಿವೆ. ಅಪಘಾತದಲ್ಲಿ ಹೆಲಿಕಾಪ್ಟರ್ ಸಂಪೂರ್ಣವಾಗಿ ನಾಶವಾಗಿದೆ, ವಿಮಾನದ ಹಿಂಭಾಗದ ಭಾಗ ಮಾತ್ರ ನೀಲಿ ಮತ್ತು ಬಿಳಿ ಬಣ್ಣದಲ್ಲಿ ಗೋಚರಿಸುತ್ತದೆ. X ನಲ್ಲಿ ಕೆಲವರು ಇದು ಅಪಘಾತವೋ ಅಥವಾ ಸಂಚಿನ ದಾಳಿಯೋ ಎಂದು ಪ್ರಶ್ನಿಸುತ್ತಿದ್ದಾರೆ. ಸದ್ಯ ಹೆಲಿಕಾಪ್ಟರ್‌ನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಮಾತ್ರ ಲಭ್ಯವಾಗಿದೆ.

ಈ ನಡುವೆ ಅಧ್ಯಕ್ಷನ ವಿರುದ್ಧ ಪ್ರತಿಭಟನೆಯಲ್ಲಿದ್ದ ಪ್ರಜೆಗಳು ಈ ಸಾವನ್ನು ಸಂಭ್ರಮಿಸಿ ಪಟಾಕಿ ಸುಡುತ್ತಿರುವ ಕುರಿತೂ ವರದಿಗಳು ಬರುತ್ತಿವೆ.

PPeepal Media Desk

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು