ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭದ್ರತೆಯ ಕೊರತೆ: ಇಸ್ರೇಲಿನಲ್ಲಿ ಪತ್ರಕರ್ತರ ಮಾರಣಹೋಮ

PPeepal Media Desk

Peepal Media Desk ವಿದೇಶ

• 1 ನಿಮಿಷದ ಓದು

ಭದ್ರತೆಯ ಕೊರತೆ: ಇಸ್ರೇಲಿನಲ್ಲಿ ಪತ್ರಕರ್ತರ ಮಾರಣಹೋಮ

ಹೊಸದಿಲ್ಲಿ: ಜಗತ್ತಿನಲ್ಲಿ ಎಲ್ಲಿ ಏನು ನಡೆದರೂ ನಿಖರ ಹಾಗೂ ವಾಸ್ತವ ಮಾಹಿತಿ ನೀಡುವ ಪತ್ರಕರ್ತರ ಕುರಿತು ಇಂದು ಮಾತನಾಡುವವರೇ ಇಲ್ಲದಂತಾಗಿದೆ. ಇಂತಹ ಪತ್ರಕರ್ತರ ಬದುಕು ಇಂದು ಗಾಳಿಯಲ್ಲಿಟ್ಟ ದೀಪದಂತಾಗುತ್ತಿದೆ.

ಕಳೆದ ಒಂದು ವರ್ಷದಲ್ಲಿ ನಡೆದಿರುವ ಪತ್ರಕರ್ತರ ಕೊಲೆಗಳೇ ಇದಕ್ಕೆ ನೇರ ಸಾಕ್ಷಿ. ಕಳೆದ ವರ್ಷ 99 ಪತ್ರಕರ್ತರು ಸಾವನ್ನಪ್ಪಿದ್ದಾರೆ. ಅವರಲ್ಲಿ 77 ಮಂದಿ ಗಾಜಾದ ಮೇಲಿನ ಇಸ್ರೇಲ್‌ ದಾಳಿಯ ಬಗ್ಗೆ ವರದಿ ಮಾಡುವಾಗ ತಮ್ಮ ಪ್ರಾಣ ಕಳೆದುಕೊಂಡರು. ಗ್ಲೋಬಲ್ ಮೀಡಿಯಾ ವಾಚ್‌ಡಾಗ್ ‘ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ (ಸಿಪಿಜೆ) ತನ್ನ ವಾರ್ಷಿಕ ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಈ ಮಾಹಿತಿಯ ಪ್ರಕಾರ, 2023 ಪತ್ರಕರ್ತರ ಪಾಲಿಗೆ ಈ ಒಂದು ದಶಕದಲ್ಲೇ ಕೆಟ್ಟ ವರ್ಷವಾಗಲಿದೆ. ಈ ವರ್ಷದಲ್ಲಿ 99 ಪತ್ರಕರ್ತರು ಸಾವನ್ನಪ್ಪಿದ್ದಾರೆ. ಅವರಲ್ಲಿ 77 ಮಂದಿ ಗಾಜಾದ ಮೇಲೆ ಇಸ್ರೇಲಿ ನರಮೇಧವನ್ನು ವರದಿ ಮಾಡುವಾಗ ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಗಮನಾರ್ಹ.

ಇಸ್ರೇಲ್-ಗಾಜಾ ಯುದ್ಧದ ಮೊದಲ ಮೂರು ತಿಂಗಳಲ್ಲಿ ಹಲವಾರು ಪತ್ರಕರ್ತರು ಕೊಲ್ಲಲ್ಪಟ್ಟರು. ಇದು ಈ ದೇಶದಲ್ಲಿ ಒಂದು ವರ್ಷದಲ್ಲಿ ದಾಖಲಾದ ಸಂಖ್ಯೆಗಿಂತ ಹೆಚ್ಚು ಎಂಬುದು ಗಮನಾರ್ಹ. ಈ 77ರಲ್ಲಿ, 72 ಪ್ಯಾಲೆಸ್ಟೈನ್, ಮೂರು ಲೆಬನಾನ್, ಮತ್ತು ಕೇವಲ ಇಬ್ಬರು ಇಸ್ರೇಲ್ ದೇಶಕ್ಕೆ ಸೇರಿದವರು. ಗುರುವಾರದ ವೇಳೆಗೆ ಇಸ್ರೇಲ್-ಗಾಜಾ ಯುದ್ಧದಲ್ಲಿ ಸಾವನ್ನಪ್ಪಿದ ಪತ್ರಕರ್ತರ ಸಂಖ್ಯೆ 88ಕ್ಕೆ ಏರಿದೆ ಎಂದು CPA ಯ ಪ್ರಾಥಮಿಕ ತನಿಖೆ ಹೇಳುತ್ತದೆ.

ತನಿಖೆ ಪೂರ್ಣಗೊಂಡ ನಂತರವೇ ಈ ಸಾವುಗಳನ್ನು ಡೇಟಾ ಬೇಸ್‌ನಲ್ಲಿ ಸೇರಿಸಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಪತ್ರಕರ್ತರ ಮೇಲೆ ಇಸ್ರೇಲ್ ಪಡೆಗಳ ದಾಳಿಯನ್ನು ನ್ಯೂಯಾರ್ಕ್ ಮೂಲದ ಸಂಘಟನೆ ಈಗಾಗಲೇ ಖಂಡಿಸಿದೆ. ಇಸ್ರೇಲಿ ಸೇನೆಯು ಉದ್ದೇಶಪೂರ್ವಕವಾಗಿ ಹತ್ತಾರು ಪತ್ರಕರ್ತರನ್ನು ಕೊಂದಿದೆಯೇ ಎಂದು ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇದೇ ನಿಜವಾದರೆ ಅದನ್ನು ‘ಯುದ್ಧಾಪರಾಧ’ ಎಂದು ಪರಿಗಣಿಸಬಹುದು.

PPeepal Media Desk

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು