ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೇಪಾಳ-ಟಿಬೆಟ್ ಗಡಿಯಲ್ಲಿ ಭಾರೀ ಭೂಕಂಪ, 53ಕ್ಕೆ ತಲುಪಿದ ಸಾವಿನ ಸಂಖ್ಯೆ

PPeepal Media

Peepal Media ವಿದೇಶ

• 1 ನಿಮಿಷದ ಓದು

ನೇಪಾಳ-ಟಿಬೆಟ್ ಗಡಿಯಲ್ಲಿ ಭಾರೀ ಭೂಕಂಪ, 53ಕ್ಕೆ ತಲುಪಿದ ಸಾವಿನ ಸಂಖ್ಯೆ

ಹಿಮಾಲಯ ರಾಷ್ಟ್ರಗಳಾದ ನೇಪಾಳ-ಟಿಬೆಟ್ ಗಡಿಯಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಮಂಗಳವಾರ ಬೆಳಗ್ಗೆ ಇಲ್ಲಿ ಸಂಭವಿಸಿದ 7.1 ತೀವ್ರತೆಯ ಭೂಕಂಪದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ.

ಈ ದುರಂತದಿಂದಾಗಿ ಟಿಬೆಟ್‌ನಲ್ಲಿ ಇದುವರೆಗೆ ಕನಿಷ್ಠ 53 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಚೀನಾದ ಅಧಿಕೃತ ಮಾಧ್ಯಮ ಈ ವಿಷಯವನ್ನು ಬಹಿರಂಗಪಡಿಸಿದೆ. ಇನ್ನೂ 62 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ವರದಿಯಾಗಿದೆ.

ನೇಪಾಳ-ಟಿಬೆಟ್ ಗಡಿಯಿಂದ 93 ಕಿ.ಮೀ ದೂರದಲ್ಲಿರುವ ಲಾಬುಚೆ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 6.35ಕ್ಕೆ ಭೂಕಂಪ ಸಂಭವಿಸಿದೆ. ಟಿಬೆಟ್‌ನ ಶಿಜಾಂಗ್‌ನಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ನೇಪಾಳದ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಕೆಲವು ಕ್ಷಣಗಳ ತೀವ್ರ ಕಂಪನದ ನಂತರ, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿದರು.

ಈ ಭೂಕಂಪದ ನಂತರ, ಟಿಬೆಟ್ ಪ್ರದೇಶದಲ್ಲಿ ಮತ್ತೆ ಎರಡು ಕಂಪನಗಳು ಸಂಭವಿಸಿವೆ. ಇವುಗಳ ತೀವ್ರತೆ 4.7 ಮತ್ತು 4.9 ಎಂದು ದಾಖಲಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಕೇಂದ್ರಬಿಂದುವಿರುವ ಟಿಬೆಟ್ ಪ್ರದೇಶದಲ್ಲಿ ಹಲವು ಕಟ್ಟಡಗಳು ನಾಶವಾಗಿವೆ. ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಭಾರತದಲ್ಲೂ ನಡುಕ..!

ಈ ಕಂಪನಗಳ ಪ್ರಭಾವ ಭಾರತದ ಉತ್ತರದ ರಾಜ್ಯಗಳಲ್ಲೂ ಕಂಡುಬಂದಿದೆ. ದೆಹಲಿ-ಎನ್‌ಸಿಆರ್, ಪಶ್ಚಿಮ ಬಂಗಾಳ ಮತ್ತು ಬಿಹಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ವರದಿಯಾಗಿದೆ. ಚೀನಾ, ಭೂತಾನ್ ಮತ್ತು ಬಾಂಗ್ಲಾದೇಶದ ಹಲವು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ. ಚೀನಾದಲ್ಲಿ ಭೂಕಂಪದ ತೀವ್ರತೆ 6.8 ಇತ್ತು.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು