ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತೆಲುಗು ವಿದ್ಯಾರ್ಥಿ ಸಾವಿನ ಕುರಿತು ಅಮೇರಿಕಾ ಪೊಲೀಸ್‌ ಲೇವಡಿ. ತನಿಖೆಗೆ ಆಗ್ರಹಿಸಿದ ಭಾರತ

P

Peepal Media Desk • ವಿದೇಶ

• 1 ನಿಮಿಷದ ಓದು

ತೆಲುಗು ವಿದ್ಯಾರ್ಥಿ ಸಾವಿನ ಕುರಿತು ಅಮೇರಿಕಾ ಪೊಲೀಸ್‌ ಲೇವಡಿ. ತನಿಖೆಗೆ ಆಗ್ರಹಿಸಿದ ಭಾರತ

ಹೊಸದಿಲ್ಲಿ: ಅಮೆರಿಕದಲ್ಲಿ ಆಂಧ್ರದ ಬಾಲಕಿಯ ಸಾವನ್ನು ಪೊಲೀಸರು ಅಣಕಿಸಿದ ಘಟನೆಯ ಕುರಿತು ಆಳವಾದ ತನಿಖೆ ನಡೆಸುವಂತೆ ಭಾರತ ಇತ್ತೀಚೆಗೆ ಅಮೆರಿಕ ಸರಕಾರವನ್ನು ಕೋರಿದೆ.

ಯುವತಿಯ ಸಾವಿನ ಕುರಿತು ಇಬ್ಬರು ಅಧಿಕಾರಿಗಳು ಕೇವಲವಾಗಿ ಮಾತನಾಡಿರುವ ಆಡಿಯೋ ರೆಕಾರ್ಡ್‌ ಒಂದು ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿದೆ.

ಅಮೆರಿಕದ ಈಶಾನ್ಯ ವಿಶ್ವವಿದ್ಯಾಲಯದ ಸಿಯಾಟಲ್ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಕಂದುಲ ಜಾಹ್ನವಿ (23) ಈ ವರ್ಷದ ಜನವರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ರಸ್ತೆ ದಾಟುತ್ತಿದ್ದ ಆಕೆಯು, ಪ್ರಕರಣವೊಂದರಲ್ಲಿ ಸಹಾಯಕ್ಕಾಗಿ ಅತಿ ವೇಗದಿಂದ ಸಾಗುತ್ತಿದ್ದ ಪೊಲೀಸ್‌ ಜೀಪ್‌ ಒಂದಕ್ಕೆ ಸಿಲುಕಿ ಸತ್ತಿದ್ದರು. ಅಂದು ಆ ಪೊಲೀಸ್‌ ಜೀಪ್‌ ಗಂಟೆ 120 ಕಿಮೀ ವೇಗದಲ್ಲಿತ್ತು ಎನ್ನಲಾಗಿದೆ. ಘಟನೆಯ ವೇಳೆ ಕೆವಿನ್ ಡೇವ್ ಎಂಬ ಪೊಲೀಸ್ ಅಧಿಕಾರಿ ಕಾರು ಚಲಾಯಿಸುತ್ತಿದ್ದರು. ಡ್ರಗ್ ಓವರ್ ಡೋಸ್ ಪ್ರಕರಣದ ಸ್ಥಳಕ್ಕೆ ವೇಗವಾಗಿ ವಾಹನ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇದೇ ವೇಳೆ ಸಂತ್ರಸ್ತ ಕುಟುಂಬಕ್ಕೆ 11 ಸಾವಿರ ಡಾಲರ್ ಪರಿಹಾರ ನೀಡಲು ಪೊಲೀಸ್ ಯೂನಿಯನ್ ಸಿದ್ಧತೆ ನಡೆಸಿತ್ತು. ಈ ವಿಚಾರವಾಗಿ ಇನ್ನಿಬ್ಬರು ಪೊಲೀಸರ ನಡುವೆ ಈ ಕುರಿತು ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಅಧಿಕಾರಿಯೊಬ್ಬರು ಜಾಹ್ನವಿ ಸಾವಿನ ಬಗ್ಗೆ ವ್ಯಂಗ್ಯವಾಡಿದರು. “ಆಕೆಗೆ ಕೇವಲ 26 ವರ್ಷ, ಅವಳೊಬ್ಬ ಸಾಮಾನ್ಯ ವ್ಯಕ್ತಿ. ಅವಳ ಜೀವಕ್ಕೆ ಬೆಲೆಯಿಲ್ಲ. ಪರಿಹಾರ ಕೊಡಿ,” ಎಂದು ಸಿಯಾಟಲ್ ಪೊಲೀಸ್ ಯೂನಿಯನ್ ಉಪಾಧ್ಯಕ್ಷ ಡೇನಿಯಲ್ ಅಡೆರೆರ್ ಆಡಿದ್ದ ವ್ಯಂಗ್ಯದ ಮಾತುಗಳು ಸಮವಸ್ತ್ರಕ್ಕೆ ಅಳವಡಿಸಿದ್ದ ಮೈಕ್ ನಲ್ಲಿ ದಾಖಲಾಗಿವೆ. ಇಲಾಖೆಯ ನಿತ್ಯದ ತಪಾಸಣೆ ವೇಳೆ ಈ ಆಡಿಯೋ ಹೊರಬಂದು ವಿವಾದಕ್ಕೆ ಕಾರಣವಾಗಿತ್ತು.

ಘಟನೆಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವ್ಯಕ್ತಿಯ ಸಾವಿನ ಕುರಿತು ಇಂತಹ ಲಘುವಾದ ಹೇಳಿಕೆ ನೀಡುತ್ತಿರುವುದು ಆತಂಕಕಾರಿಯಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅದು ಆಗ್ರಹಿಸಿದೆ.

ಈ ವಿಷಯವನ್ನು ಸಿಯಾಟಲ್ ಮತ್ತು ವಾಷಿಂಗ್ಟನ್‌ನ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಮತ್ತು ಘಟನೆಯ ಬಗ್ಗೆ ಆಳವಾದ ತನಿಖೆಗೆ ಮನವಿ ಮಾಡಿರುವುದಾಗಿ ಕಾನ್ಸುಲೇಟ್ ಕಚೇರಿ ‘ಎಕ್ಸ್’ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ವಿಷಯಗಳು: #india #peepal #peepalmedia #politics
P

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version