ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟೆಸ್ಲಾ ಶೋರೂಂಗೆ ಬೆಂಕಿ, ಸುಟ್ಟು ಬೂದಿಯಾದ ಕಾರುಗಳು, ಇದು ಭಯೋತ್ಪಾದಕ ಕೃತ್ಯ ಎಂದ ಮಸ್ಕ್

PPeepal Media

Peepal Media • ವಿದೇಶ

• 1 ನಿಮಿಷದ ಓದು

ಟೆಸ್ಲಾ ಶೋರೂಂಗೆ ಬೆಂಕಿ, ಸುಟ್ಟು ಬೂದಿಯಾದ ಕಾರುಗಳು, ಇದು ಭಯೋತ್ಪಾದಕ ಕೃತ್ಯ ಎಂದ ಮಸ್ಕ್

ಅಮೆರಿಕದಲ್ಲಿ ಟೆಸ್ಲಾ ಕಾರು ಕಂಪನಿ ಅನಿರೀಕ್ಷಿತ ಹಿನ್ನಡೆ ಅನುಭವಿಸಿದೆ. ಪ್ರಮುಖ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾದ ಟೆಸ್ಲಾ ಕಂಪನಿಯ ಶೋ ರೂಮಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮವಾಗಿ, ಈ ಘಟನೆಯಲ್ಲಿ ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿಯ ತೀವ್ರತೆಗೆ ಜ್ವಾಲೆಗಳು ಭುಗಿಲೆದ್ದವು. ಇದೀಗ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಪ್ರತಿಕ್ರಿಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಶೋರೂಮ್‌ ಗಾಜಿನ ಮೇಲೆ “RESIST” ಎಂದು ಬರೆಯಲಾಗಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಟೆಸ್ಲಾ ಸಿಇಒ ಎಲಾನ್ ಮಸ್ಕ್ ಈ ಘಟನೆಗೆ ಪ್ರತಿಕ್ರಿಯಿಸಿ ಇದನ್ನು “ಖಂಡಿತವಾಗಿಯೂ ಭಯೋತ್ಪಾದಕ ಕೃತ್ಯ” ಎಂದು ಬಣ್ಣಿಸಿದ್ದಾರೆ.

ಎಲೋನ್ ಮಸ್ಕ್ ಪ್ರಸ್ತುತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿದ್ದಾರೆ. ಸರ್ಕಾರಿ ನಾಯಕತ್ವದಲ್ಲಿ ಮಸ್ಕ್‌ ಪ್ರಭಾವ ಹೆಚ್ಚಾಗಿ ಗೋಚರಿಸುತ್ತಿದೆ. ಸರ್ಕಾರಿ ಖರ್ಚುಗಳನ್ನು ಕಡಿಮೆ ಮಾಡಲು ಟ್ರಂಪ್ ಸರ್ಕಾರಿ ದಕ್ಷತೆ ಇಲಾಖೆಯನ್ನು ರಚಿಸಿದರು. ಮಸ್ಕ್ ಇದನ್ನು ನೋಡಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಸಾವಿರಾರು ಫೆಡರಲ್ ಮತ್ತು ಇತರ ಸರ್ಕಾರಿ ನೌಕರರನ್ನು ವಜಾಗೊಳಿಸಲಾಗಿದೆ. ಇದು ಮಸ್ಕ್ ವಿರುದ್ಧ ತೀವ್ರ ವಿರೋಧಕ್ಕೆ ಕಾರಣವಾಗುತ್ತಿದೆ. ಅವರ ಮೇಲೆ ಅನೇಕ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ವರದಿಯಾಗಿದೆ. ಆ ಪ್ರಕ್ರಿಯೆಯ ಭಾಗವಾಗಿ, ಅವರ ಕಾರು ಶೋ ರೂಂ ಬೆಂಕಿಗೆ ಆಹುತಿಯಾಗಿರುವ ಕುರಿತು ಅನುಮಾನಗಳು ವ್ಯಕ್ತವಾಗುತ್ತಿವೆ.

ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ಮೂಲ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಮಸ್ಕ್ ಆರೋಪಿಸಿದಂತೆ ಅವರು ಭಯೋತ್ಪಾದನಾ ಕೃತ್ಯ ವಿರುಬಹುದೇ ಎನ್ನುವ ನಿಟ್ಟಿನಲ್ಲೂ ತನಿಖೆ ನಡೆಸುತ್ತಿದ್ದಾರೆ.
https://x.com/CristenDrummond/status/1902060543281901611

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು