ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

12 ದೇಶಗಳ ಪ್ರಜೆಗಳಿಗೆ ಅಮೆರಿಕಾ ಪ್ರವೇಶ ನಿಷೇಧಿಸಿದ ಟ್ರಂಪ್‌ ಆಡಳಿತ

PPeepal Media

Peepal Media • ವಿದೇಶ

• 1 ನಿಮಿಷದ ಓದು

12 ದೇಶಗಳ ಪ್ರಜೆಗಳಿಗೆ ಅಮೆರಿಕಾ ಪ್ರವೇಶ ನಿಷೇಧಿಸಿದ ಟ್ರಂಪ್‌ ಆಡಳಿತ

ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವು ಸಂಚಲನಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ನಿರ್ಧಾರವಾಗಿ ಅವರು 12 ದೇಶಗಳ ಪ್ರಜೆಗಳಿಗೆ ಅಮೆರಿಕ ಪ್ರವೇಶವನ್ನು ನಿಷೇಧಿಸಿದ್ದಾರೆ.

ಬುಧವಾರ ಇದಕ್ಕೆ ಸಂಬಂಧಿಸಿದ ಆದೇಶಕ್ಕೆ ಅವರು ಸಹಿ ಹಾಕಿದ್ದಾರೆ. ಕೊಲರಾಡೊದ ಬೋಲ್ಡರ್ ಕೌಂಟಿಯಲ್ಲಿ ಇತ್ತೀಚೆಗೆ ಯಹೂದಿಗಳ ಮೇಲೆ‌ ನಡೆದ ಬಾಟಲ್‌ ಬಾಂಬ್ ದಾಳಿ ಘಟನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನ, ಇರಾನ್, ಯೆಮನ್, ಮಯನ್ಮಾರ್, ಚಾಡ್, ಕಾಂಗೊ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೈತಿ, ಲಿಬಿಯಾ, ಸೊಮಾಲಿಯಾ, ಸೂಡಾನ್ ದೇಶಗಳು ಈ ನಿಷೇಧದ ಪಟ್ಟಿಯಲ್ಲಿವೆ.

ಇದರ ಜೊತೆಗೆ ಬುರುಂಡಿ, ಕ್ಯೂಬಾ, ಲಾವೋಸ್, ಸಿಯೆರಾ ಲಿಯೋನ್, ಟೊಗೊ, ತುರ್ಕಮೆನಿಸ್ತಾನ್, ವೆನಿಜುವೆಲಾ ಸೇರಿದಂತೆ ಏಳು ದೇಶಗಳ ಮೇಲೆ ಭಾಗಶಃ ನಿಷೇಧವನ್ನು ವಿಧಿಸಲಾಗಿದೆ. ಈ ಆದೇಶವು ಸೋಮವಾರದಿಂದ ಜಾರಿಗೆ ಬರಲಿದೆ ಎಂದು ವೈಟ್‌ಹೌಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಕೊಲರಾಡೊದ ಬೋಲ್ಡರ್ ಕೌಂಟಿಯಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿ ನಡೆದಿದೆ. ಸರಿಯಾದ ದಾಖಲೆಗಳಿಲ್ಲದೆ ವಿದೇಶಿ ಪ್ರಜೆಗಳು ದೇಶದಲ್ಲಿ ಇರುವುದೇ ಇಂತಹ ಘಟನೆಗಳಿಗೆ ಕಾರಣವಾಗಿದೆ. 2017ರಲ್ಲಿ ಯುರೋಪ್‌ನಲ್ಲಿ ಸಂಭವಿಸಿದಂತಹ ಘಟನೆಗಳು ಅಮೆರಿಕದಲ್ಲಿ ಮರುಕಳಿಸಲು ಬಿಡುವುದಿಲ್ಲ. ಸುರಕ್ಷಿತವಲ್ಲದ ದೇಶಗಳಿಂದ ಬರುವ ತೆರೆದ ವಲಸೆಯನ್ನು ಇನ್ನು ಅನುಮತಿಸಲಾಗದು.

ಹೀಗಾಗಿ ಯೆಮನ್, ಸೊಮಾಲಿಯಾ, ಹೈತಿ, ಲಿಬಿಯಾ ಸೇರಿದಂತಹ ಹಲವು ದೇಶಗಳ ಪ್ರಯಾಣಿಕರ ಮೇಲೆ ನಿಷೇಧ ಹೇರಲು ಆದೇಶಕ್ಕೆ ಸಹಿ ಹಾಕುತ್ತಿದ್ದೇನೆ” ಎಂದು ಟ್ರಂಪ್ ಒಂದು ವೀಡಿಯೊದಲ್ಲಿ ಹೇಳಿದ್ದಾರೆ. ಇದಕ್ಕೂ ಮೊದಲು 2017ರಲ್ಲಿ ಟ್ರಂಪ್ ಮೊದಲ ಅವಧಿಯಲ್ಲಿ ಕೆಲವು ಮುಸ್ಲಿಂ ದೇಶಗಳ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿದ್ದರು.

ವಿದೇಶಿ ವಿದ್ಯಾರ್ಥಿಗಳ ವೀಸಾ ಮೇಲೆ ನಿರ್ಬಂಧ

ಇದೇ ವೇಳೆ, ಟ್ರಂಪ್ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವಿನ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ಈ ಸಂದರ್ಭದಲ್ಲಿ, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಓದಲು ಬಯಸುವ ವಿದೇಶಿ ವಿದ್ಯಾರ್ಥಿಗಳ ವೀಸಾದ ಮೇಲೆ ನಿರ್ಬಂಧ ಹೇರಲು ಟ್ರಂಪ್ ಆದೇಶಕ್ಕೆ ಸಹಿ ಹಾಕಿದ್ದಾರೆ. “ಅಮೆರಿಕದ ಹಿತಾಸಕ್ತಿಗಳಿಗೆ ಹಾನಿಯುಂಟು ಮಾಡುವವರಿಗೆ ನಮ್ಲಲ್ಲಿ ಜಾಗವಿಲ್ಲ. ಹಾರ್ವರ್ಡ್ ಇಂತಹವರಿಗೆ ಆಶ್ರಯ ಕೇಂದ್ರವಾಗಿ ಮಾರ್ಪಟ್ಟಿದೆ” ಎಂದು ಟ್ರಂಪ್ ಟೀಕಿಸಿದ್ದಾರೆ.

ಆದರೆ, ಈ ಆದೇಶವು ಕೇವಲ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತವಾಗಿದ್ದು, ದೇಶದ ಇತರ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಯುಎಸ್ ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು