ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇರಾನ್ ಪ್ರತಿದಾಳಿ ಬಗ್ಗೆ ‘ಶಾಕಿಂಗ್’ ಹೇಳಿಕೆ: ಅಮೇರಿಕಾದ ಸೋಲಿನ ಮುನ್ಸೂಚನೆ ಕೊಟ್ಟ ಟ್ರಂಪ್

PPeepal Media Desk

Peepal Media Desk ವಿದೇಶ

• 1 ನಿಮಿಷದ ಓದು

ಇರಾನ್ ಪ್ರತಿದಾಳಿ ಬಗ್ಗೆ ‘ಶಾಕಿಂಗ್’ ಹೇಳಿಕೆ: ಅಮೇರಿಕಾದ ಸೋಲಿನ ಮುನ್ಸೂಚನೆ ಕೊಟ್ಟ ಟ್ರಂಪ್

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇರಾನ್ ಹಲವಾರು ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ನಡೆಸಿದ ಬಗ್ಗೆ “ಯಾರೂ ನಿರೀಕ್ಷಿಸಿರಲಿಲ್ಲ, ನಾವು ಶಾಕ್ ಆಗಿದ್ದೇವೆ” ಎಂದು ಟ್ರಂಪ್ ಹೇಳಿರುವುದು ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಅಮೆರಿಕಾ–ಇಸ್ರೇಲ್ ದಾಳಿಗಳ ನಂತರ ಇರಾನ್ ಕತಾರ್, ಸೌದಿ ಅರೇಬಿಯಾ, ಯುಎಇ, ಬಹ್ರೇನ್ ಮತ್ತು ಕುವೈತ್ ಸೇರಿದಂತೆ ಹಲವು ದೇಶಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಈ ದಾಳಿಗಳು ಪ್ರಾದೇಶಿಕ ಮಟ್ಟದಲ್ಲಿ ಯುದ್ಧವನ್ನು ವಿಸ್ತರಿಸಿದಂತೆ ಪರಿಣಮಿಸಿವೆ.

ಆದರೆ, ಈ ಬೆಳವಣಿಗೆಗಳ ಬಗ್ಗೆ ಟ್ರಂಪ್ ನೀಡಿದ “ಅನಿರೀಕ್ಷಿತ” ಎಂಬ ಹೇಳಿಕೆಗೆ ವಿರುದ್ಧವಾಗಿ ಅಮೆರಿಕ ಗುಪ್ತಚರ ವರದಿಗಳು ಬೇರೆ ಚಿತ್ರಣ ನೀಡುತ್ತಿವೆ. ಇರಾನ್ ಪ್ರತಿದಾಳಿ ನಡೆಸುವ ಸಾಧ್ಯತೆ ಬಗ್ಗೆ ಟ್ರಂಪ್ ಅವರಿಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿತ್ತು, ಆದರೆ ಟ್ರಂಪ್ ಇದನ್ನು ನಿರ್ಲಕ್ಷಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ಮೌಲ್ಯಮಾಪನದಲ್ಲಿ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಸಂಭವಿಸಬಹುದು ಎಂಬುದನ್ನು ‘ಸಂಭಾವ್ಯ ಫಲಿತಾಂಶ’ ಎಂದು ಗುರುತಿಸಲಾಗಿತ್ತು. ಅಲ್ಲದೆ, ಜಗತ್ತಿನ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹೋರ್ಮುಜ್ ಕಣಿವೆಯನ್ನು ಮುಚ್ಚುವ ಸಾಧ್ಯತೆಯೂ ಚರ್ಚೆಗೆ ಬಂದಿತ್ತು ಎಂದು ತಿಳಿದುಬಂದಿದೆ.

ಇದಾದ ಬಳಿಕ ನಡೆದ ಇರಾನ್ ದಾಳಿಗಳು ಅಮೆರಿಕ ಸೈನಿಕ ತಾಣಗಳು ಹಾಗೂ ತೈಲ ಮೂಲಸೌಕರ್ಯಗಳನ್ನೂ ಗುರಿಯಾಗಿಸಿಕೊಂಡಿದ್ದು, ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ಪರಿಣಾಮ ಬೀರಿವೆ.

ಈ ನಡುವೆ ಯುದ್ಧದ ಪರಿಣಾಮವಾಗಿ ಹೋರ್ಮುಜ್ ಕಣಿವೆಯಲ್ಲಿ ಸಾಗಣೆ ವ್ಯತ್ಯಯ ಉಂಟಾಗಿ ಜಾಗತಿಕ ತೈಲ ಪೂರೈಕೆ ಸಂಕಷ್ಟಕ್ಕೆ ಒಳಗಾಗಿದೆ. ಹಲವು ದೇಶಗಳು ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕೆಲ ಮಿತ್ರ ರಾಷ್ಟ್ರಗಳು ಅಮೆರಿಕದ ಕಾರ್ಯಾಚರಣೆಗೆ ಬೆಂಬಲ ನೀಡಲು ಹಿಂದೇಟು ಹಾಕಿವೆ.

ಅಂತರರಾಷ್ಟ್ರೀಯ ವಿಶ್ಲೇಷಕರ ಪ್ರಕಾರ, ಟ್ರಂಪ್ ಅವರ ಸಾರ್ವಜನಿಕ ಹೇಳಿಕೆಗಳು ಮತ್ತು ಗುಪ್ತಚರ ಮಾಹಿತಿ ನಡುವೆ ಇರುವ ವ್ಯತ್ಯಾಸವು ಆಡಳಿತದ ನಿರ್ಧಾರ ಪ್ರಕ್ರಿಯೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಯುದ್ಧದ ವ್ಯಾಪ್ತಿ ಮತ್ತು ಪರಿಣಾಮಗಳನ್ನು ಸರಿಯಾಗಿ ಅಂದಾಜಿಸಲು ವಿಫಲವಾದರೆಂಬ ಟೀಕೆಗಳು ಕೇಳಿಬರುತ್ತಿವೆ.

PPeepal Media Desk

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು