ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯೆಮೆನ್ ಮೇಲೆ ಅಮೆರಿಕ ವಾಯುದಾಳಿ: 38 ಮಂದಿ ಸಾವು

P

Peepal Media • ವಿದೇಶ

• 1 ನಿಮಿಷದ ಓದು

ಯೆಮೆನ್ ಮೇಲೆ ಅಮೆರಿಕ ವಾಯುದಾಳಿ: 38 ಮಂದಿ ಸಾವು

ಸನಾ: ಯೆಮನ್‌ನ ಪ್ರಮುಖ ಪ್ರದೇಶವಾದ ರಾಸ್ ಇಸಾ ತೈಲ ಬಂದರನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದೆ. ಅಮೇರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ 38 ಜನರು ಸಾವಿಗೀಡಾಗಿದ್ದಾರೆ.

ಇನ್ನೂ 102 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ದಾಳಿಗಳನ್ನು ಅಮೆರಿಕದ ಮಿಲಿಟರಿಯ ಕೇಂದ್ರ ಕಮಾಂಡ್ ಹಾಗೂ ಹೌತಿ ಆರೋಗ್ಯ ಸಚಿವಾಲಯ ದೃಢಪಡಿಸಿವೆ.

ಯೆಮನ್‌ನ ರಾಸ್ ಇಸ್ಸಾ ತೈಲ ಬಂದರು ಹೌತಿ ಬಂಡುಕೋರರ ನಿಯಂತ್ರಣದಲ್ಲಿದೆ . ಹೌತಿಗಳಿಗೆ ಇಂಧನ ಪೂರೈಸುವ ನೆಲೆಯನ್ನು ನಾಶಮಾಡಲು ಮತ್ತು ಅವರ ಆದಾಯದ ಮೂಲಗಳನ್ನು ನಾಶಪಡಿಸಲು ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಮೆರಿಕ ಘೋಷಿಸಿದೆ.

ಆದರೆ ಯೆಮೆನ್ ಪ್ರಜೆಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಮೇರಿಕ ಹೇಳಿದೆ. ಮಾರ್ಚ್ 15ರಂದು ಹೌತಿಗಳ ವಿರುದ್ಧ ಯುದ್ಧ ಘೋಷಣೆಯ ನಂತರ ನಡೆದ ಅತಿದೊಡ್ಡ ದಾಳಿ ಇದಾಗಿದೆ ಎಂದು ಅದು ಹೇಳಿದೆ.

ಕಳೆದ ತಿಂಗಳು 17 ರಂದು ಅಮೆರಿಕ ಕೂಡ ಹೌತಿಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಶನಿವಾರ, ಅಮೆರಿಕದ ಪಡೆಗಳು ಯೆಮೆನ್‌ನ ರಾಜಧಾನಿ ಸನಾ, ಸಾದಾ ಮತ್ತು ಹೌತಿಗಳ ಭದ್ರಕೋಟೆಗಳಾದ ಅಲ್-ಬೈದ್ ಮತ್ತು ರಾಡಾದ ಮೇಲೆ ಬಾಂಬ್‌ಗಳ ಮಳೆ ಸುರಿಸಿದವು.

ಕೆಂಪು ಸಮುದ್ರದಲ್ಲಿ ಒಂದು ಸೂಪರ್ ಪವರ್ ಹಡಗಿನ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಗೆ ಪ್ರತಿಕ್ರಿಯೆಯಾಗಿ ಅಮೆರಿಕದ ಬೃಹತ್ ಬಾಂಬ್ ದಾಳಿಯಲ್ಲಿ 31 ಜನರು ಸಾವಿಗೀಡಾಗಿದ್ದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಾಂಬ್ ದಾಳಿಗಳು ಭೂಕಂಪದಂತೆ ಪ್ರದೇಶಗಳನ್ನು ನಡುಗಿಸಿದವು ಎಂದು ಸ್ಥಳೀಯರು ಹೇಳಿದ್ದಾರೆ.

P

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version