ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಈ ಬಾರಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಘೋಷಿಸಿದ್ದಾರೆ.
ಬಾನು ಮುಷ್ತಾಕ್ ಕರ್ನಾಟಕದ ಹಾಸನದಲ್ಲಿ ಏಪ್ರಿಲ್ 3, 1948 ರಂದು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ಬರಹಗಾರ್ತಿಯಾಗಿ, ಸಾಮಾಜಿಕ ಕಾರ್ಯಕರ್ತೆಯಾಗಿ ಮತ್ತು ವಕೀಲೆಯಾಗಿ ಬಾನು ಮುಷ್ತಾಕ್ ತಮ್ಮ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ದೀಪಾ ಭಸ್ತಿ ಅನುವಾದಿಸಿದ ಅವರ ಸಣ್ಣ ಕಥೆಗಳ ಆಯ್ದ ಭಾಗವಾದ ಹಾರ್ಟ್ ಲ್ಯಾಂಪ್ಗೆ ಅತಿ ಹೆಚ್ಚು ಜನಮನ್ನಣೆ ತಂದುಕೊಟ್ಟಿದೆ. ಈ ಪುಸ್ತಕವು 2025 ರಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ.
ದಸರಾ ಉದ್ಘಾಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬ ವದಂತಿಗಳು ಹರಡಿದ್ದವು, ಆದರೆ ಅದು ಸುಳ್ಳು ಎಂದು ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.