ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಒಂಬತ್ತು ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ ದೇಶಮುಖ್ ಅವರ ವಿರುದ್ಧ ಯಾದಗಿರಿ ಡಿಡಿಪಿಐ (DDPI) ಚನ್ನಬಸಪ್ಪ ಮುಧೋಳ ಅಮಾನತು ಆದೇಶ ಹೊರಡಿಸಿದ್ದಾರೆ.
ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಕಳೆದ ನವೆಂಬರ್‌ನಲ್ಲಿ ತಾಳಿಕೋಟೆಯಲ್ಲಿ ಪಥಸಂಚಲನ ಆಯೋಜಿಸಲಾಗಿತ್ತು. ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಈ ಇಬ್ಬರು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಕರು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಅಧಿಕಾರಿಗಳಿಗೆ ಸತತ ದೂರು ನೀಡಿದ್ದರು. ಈ ದೂರುಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇದೀಗ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದೆ.
