Home ಬೆಂಗಳೂರು ಸಚಿವರಾಗಿ ಮೊದಲ ಬಾರಿಗೆ ಯತೀಂದ್ರ ಸಿದ್ದರಾಮಯ್ಯ – ಪ್ರಮಾಣ ವಚನ ಸ್ವೀಕಾರ

ಸಚಿವರಾಗಿ ಮೊದಲ ಬಾರಿಗೆ ಯತೀಂದ್ರ ಸಿದ್ದರಾಮಯ್ಯ – ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕದ(karnataka) 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌(DK Shivakumar) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಡಿಕೆ ಶಿವಕುಮಾರ್‌ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ(Dr.yathindra) ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೊದಲ ಬಾರಿಗೆ ಸಚಿವ ಸ್ಥಾನದ ಗರಿ
ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯ ಸಂಪುಟ ರಚನೆಯಲ್ಲಿ ಹಿರಿಯ ನಾಯಕರ ನಡುವೆ ಯುವಕರಿಗೆ ಮತ್ತು ಹೊಸ ಮುಖಗಳಿಗೆ ಆದ್ಯತೆ ನೀಡಬೇಕು ಎಂಬ ಹೈಕಮಾಂಡ್ ಸೂತ್ರದ ಅಡಿಯಲ್ಲಿ ಯತೀಂದ್ರ ಅವರಿಗೆ ಮೊದಲ ಪಟ್ಟಿಯಲ್ಲೇ ಸ್ಥಾನ ಕಲ್ಪಿಸಲಾಗಿದೆ. ಪ್ರಸ್ತುತ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನಪರಿಷತ್ (MLC) ಸದಸ್ಯರಾಗಿದ್ದಾರೆ

ಈ ಹಿಂದೆ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ತದನಂತರ ಪಕ್ಷ ಇವರ ಸಂಘಟನಾ ಶಕ್ತಿಯನ್ನು ಗುರುತಿಸಿ ಮೇಲ್ಮನೆಗೆ ಆಯ್ಕೆ ಮಾಡಿತ್ತು. ಇದೀಗ ಮೇಲ್ಮನೆಯ ಸದಸ್ಯರ ಕೋಟಾದ ಅಡಿಯಲ್ಲಿಯೇ ಇವರಿಗೆ ಜವಾಬ್ದಾರಿಯುತ ಸಚಿವ ಸ್ಥಾನದ ಸಾರಥ್ಯ ಸಿಕ್ಕಿದೆ.

ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ನಡೆದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಗಣ್ಯಾತಿಗಣ್ಯರ ಸಾಕ್ಷಿಗೆ ಸಾಕ್ಷಿಯಾಯಿತು. ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ನೂತನ ಸಿಎಂ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮತ್ತು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ದೆಹಲಿಯ ಪ್ರಮುಖ ನಾಯಕರ ದಂಡೇ ಪಾಲ್ಗೊಂಡಿತ್ತು.

ವೇದಿಕೆಯ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಂಪುಟ ಸೇರಿದ 13 ಜನ ಹೊಸ ಸಚಿವರಾದ ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಶರಣಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನೂರಾರು ಶಾಸಕರು ಮತ್ತು ಸಂಸದರು ಉಪಸ್ಥಿತರಿದ್ದರು. ಇವರೊಂದಿಗೆ ವಿವಿಧ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ವಿವಿಧ ರಾಜ್ಯಗಳ ಪಿಸಿಸಿ ಅಧ್ಯಕ್ಷರು ಆಗಮಿಸಿ ಶುಭ ಹಾರೈಸಿದರು.

You cannot copy content of this page

Exit mobile version