Thursday, October 24, 2024

ಸತ್ಯ | ನ್ಯಾಯ |ಧರ್ಮ

ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಯೋಗೇಶ್ವರ್, ಶಿಗ್ಗಾವಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆ ಸಮರದಲ್ಲಿ ಪ್ರತಿಷ್ಠಿತ ಕ್ಷೇತ್ರವಾಗಿರುವ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ನಿಂದ ಯೋಗೇಶ್ವರ್ ಮತ್ತು ಶಿಗ್ಗಾವಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಹಾಗೂ ಸಂಡೂರಿನಲ್ಲಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಅದ್ಧೂರಿಯ ಮೆರವಣಿಗೆ ಮೂಲಕ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಮತ್ತು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಹಾಗೆಯೇ ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬಸವರಾಜ ಬೊಮಾಯಿ ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅನ್ನಪೂರ್ಣ ಇ.ತುಕಾರಾಂ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮುನ್ನ ರೋಡ್‌ ಷೋ ನಡೆಸಿ ಅನಂತರ ತಮ ಪಕ್ಷದ ನಾಯಕರು, ಮುಖಂಡರ ಜೊತೆಗೂಡಿ ಚುನಾವಣಾಧಿಕಾರಿಗಳಿಗೆ ತಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಮೂರೂ ಕ್ಷೇತ್ರಗಳಿಗೂ ಆಡಳಿತಾರೂಢ ಕಾಂಗ್ರೆಸ್‌‍ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ. ಈ ಚುನಾವಣೆಯಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್‌‍ ಹೊಂದಾಣಿಕೆ ಮುಂದುವರೆದಿದ್ದು, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ವಿವೇಚನೆಯನ್ನು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರಿಗೆ ನೀಡಲಾಗಿತ್ತು. ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ರವರನ್ನು ಕಣಕ್ಕಿಳಿಸುವ ಪ್ರಯತ್ನ ಫಲ ನೀಡಲಿಲ್ಲ. ಈಗ ಅವರೇ ಎನ್‌ಡಿಎ ಅಭ್ಯರ್ಥಿಯ ಎದುರಾಳಿಯಾಗಿ ಕಾಂಗ್ರೆಸ್‌‍ನಿಂದ ಕಣಕ್ಕಿಳಿದಿದ್ದಾರೆ.ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದರೂ ಚನ್ನಪಟ್ಟಣ ಕ್ಷೇತ್ರಕ್ಕೆ ಬಹುತೇಕ ನಿಖಿಲ್ ಸ್ಪರ್ಧೆ ಖಚಿತ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page