ಉತ್ತರ ಪ್ರದೇಶ : ಯಾರ ಅನುಮತಿಯನ್ನು ಪಡೆಯದೆ ಖಾಲಿ ಮನೆಯಲ್ಲಿ ನಮಾಝ್ (Namaz) ಮಾಡಿದ ಕಾರಣಕ್ಕಾಗಿ 12 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ(Uttar Pradesh) ಬರೇಲಿ(Bareilly) ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಕಳೆದ ಹಲವಾರು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದರಸಾವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್‌ಪಿ(ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.
“ಅನುಮತಿ ಇಲ್ಲದೆ ಯಾವುದೇ ಹೊಸ ಧಾರ್ಮಿಕ ಚಟುವಟಿಕೆ ಅಥವಾ ಸಭೆ ನಡೆಸುವುದು ಕಾನೂನಿನ ಬಾಹಿರವಾಗಿದೆ. ಅಂತಹ ಚಟುವಟಿಕೆಗಳು ಪುನರಾವರ್ತನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕ” ಎಂದು ಮನವಿ ಮಾಡಿದರು.
ಪೊಲೀಸರ ಮಾಹಿತಿ ಪ್ರಕಾರ, ಖಾಲಿಯಿದ್ದ ಮನೆ ಹನೀಫ್ ಎಂಬುವವರಿಗೆ ಸೇರಿದ್ದು, ಶುಕ್ರವಾರದ ನಮಾಜ್‌ಗೆ ತಾತ್ಕಾಲಿಕವಾಗಿ ಬಳಸಲಾಗುತ್ತಿತ್ತು. ಒಟ್ಟು 15 ಮಂದಿ ನಮಾಜ್ ಮಾಡುತ್ತಿದ್ದು, ಮೂವರು ತಲೆ ಮರೆಸಿಕೊಂಡಿದ್ದಾರೆ. ಅವರನ್ನ ಪತ್ತೆಹಚ್ಚಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬಂಧಿತ 12 ಜನರ ವಿರುದ್ಧ ಶಾಂತಿ ಉಲ್ಲಂಘನೆಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅವರಿಗೆ ಕೋರ್ಟ್ ಜಾಮೀನು ನೀಡಿದೆ.
ನೆಟ್ಟಿಗರ ಆಕ್ರೋಶ
ಯೋಗಿ ಸರ್ಕಾರದ ಈ ನಡೆಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ ಖಾಲಿ ಕಟ್ಟಡಲ್ಲಿ ನಮಾಜ್ ಮಾಡಿದರೆ ನಿಮಗೇನು ಸಮಸ್ಯೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
