ಅರಸೀಕೆರೆಯಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ – ತನಿಖೆ ಆರಂಭ

ಅರಸೀಕೆರೆ: ಹಾಸನ ಜಿಲ್ಲೆಯ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಮೃತ ಯುವಕ ಶಿವಮೊಗ್ಗದಿಂದ ಬೆಂಗಳೂರಿನ ಯಶವಂತಪುರಕ್ಕೆ ಪ್ರಯಾಣಿಸಲು ರೈಲು ಟಿಕೆಟ್ ಪಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಅರಸೀಕೆರೆ ರೈಲ್ವೆ ನಿಲ್ದಾಣದ ಬಳಿ ಆತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತನ ಬಗ್ಗೆ ಮಾಹಿತಿ ತಿಳಿದಿರುವವರು ಅಥವಾ ಕುಟುಂಬಸ್ಥರು ತಕ್ಷಣ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು