ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರಕ್ಕೆ ನೂತನ ಮುಖ್ಯಮಂತ್ರಿಯಾಗಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.
ನವದೆಹಲಿಯಲ್ಲಿ ನಡೆದ ಸಭೆಯ ನಂತರ, ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಖೇಮ್‌ಚಂದ್ ಸಿಂಗ್ ಆಯ್ಕೆಯಾದರು.
ಆ ನಂತರ ಮಂಗಳವಾರ, ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ಬಿಜೆಪಿ ಘೋಷಿಸಿತು. ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟದ ಇತರ ಪಕ್ಷಗಳ ಶಾಸಕರು ಖೇಮ್‌ಚಂದ್ ಅವರ ಹೆಸರನ್ನು ಅನುಮೋದಿಸಿದ ನಂತರ, ವಿಧಾನಸಭೆಯಲ್ಲಿನ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಅವರನ್ನು ಆಯ್ಕೆ ಮಾಡಬೇಕಾಗುತ್ತದೆ.
