ಉತ್ತರ ಪ್ರದೇಶ : ಇಂದು ಯುಪಿಯ ಬದೌನ್ ಜಿಲ್ಲೆಯಲ್ಲಿರುವ ಕಾಡಿನಲ್ಲಿ ಅಪ್ರಾಪ್ತ ಬಾಲಕಿಯ ಮೃತ ದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಎಸ್‌ಪಿ ಡಾ. ಓಂಪ್ರಕಾಶ್ ಸಿಂಗ್ ಹೇಳಿದ್ದಾರೆ.

ಇಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿರುವ ಫೈಜ್‌ಗಂಜ್ ಬೆಹ್ತಾ ಪಿಎಸ್ ವ್ಯಾಪ್ತಿಯ ಅಸಫ್‌ಪುರ ರೈಲು ನಿಲ್ದಾಣದ ಬಳಿ ಇರುವ ಕಾಡೊಂದರಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದ್ದು ಪ್ರತ್ಯಕ್ಷದಾರರು ಪೋಲಿಸ್ ಠಾಣೆಗೆ ವಿಷಯ ತಿಳಿದ್ದಾರೆ. ಸ್ಥಳಕ್ಕೆ ಬಂದ ಅಲ್ಲಿನ ಪೋಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳುತ್ತೇವೆ ಎಂದು ಅಲ್ಲಿನ ಎಸ್‌ಎಸ್‌ಪಿ ಡಾ. ಓಂಪ್ರಕಾಶ್ ಸಿಂಗ್ ಮಾಹಿತಿ ನೀಡಿದ್ದಾರೆ.