Thursday, April 24, 2025

ಸತ್ಯ | ನ್ಯಾಯ |ಧರ್ಮ

ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ…ಎಕ್ಕ ಟೀಸರ್‌ ಚಿಂದಿ!

ʼಎಕ್ಕʼ ಟೀಸರ್‌ ರಿಲೀಸ್…ಡಿಫರೆಂಟ್‌ ಅವತಾರದಲ್ಲಿ ಯುವರಾಜ್‌ ಕುಮಾರ್!‌
ಸೈಕ್‌ ಆಗಿದೆ ಯುವ ಟೀಸರ್.. ಪರಿಸರ ಸಂರಕ್ಷಣೆಗೆ ಯುವ ಪಣ?

ಕನ್ನಡ ಚಿತ್ರರಂಗದ ಭರವಸೆ ನಾಯಕ ಯುವರಾಜ್‌ ಕುಮಾರ್‌ ಹುಟ್ಟುಹಬ್ಬದ ಅಂಗವಾಗಿ ನಿನ್ನೆ ಬಿಡುಗಡೆಯಾಗಬೇಕಿದ್ದ ಯುವ ಟೀಸರ್‌ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್‌ ಬಿಡುಗಡೆ ಮುಂದೂಡಿತ್ತು. ಇಂದು ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇ ಸ್ಪೆಷಲ್‌ ಆಗಿಯೇ ಟೀಸರ್‌ ರಿಲೀಸ್‌ ಆಗಿದೆ.

1 ನಿಮಿಷ 9 ಸೆಕೆಂಡ್‌ ಇರುವ ಯುವ ಟೀಸರ್‌ ಸೈಕ್‌ ಆಗಿದೆ. ಹೊಸ ಅವತಾರದಲ್ಲಿ ಯುವರಾಜ್‌ ಕುಮಾರ್‌ ಎಂಟ್ರಿ ಕೊಟ್ಟಿದ್ದಾರೆ. ಮಗು-ಮೃಗ ಅಂತಾ ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತಾ ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

ಯುವ ಆಕ್ಟಿಂಗ್‌, ರೋಹಿತ್‌ ಪದಕಿ ಟೇಕಿಂಗ್‌, ಚರಣ್‌ ರಾಜ್‌ ಮ್ಯೂಸಿಕ್‌ ಕಿಕ್‌ ಟೀಸರ್‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ಯುವ ಟೈಟಲ್‌ ಟ್ರ್ಯಾಕ್‌ ಚಿಂದಿ ಉಡಾಯಿಸಿದ್ದು, ಈಗ ಟೀಸರ್‌ ಸರದಿ ಅಂತಾ ಫ್ಯಾನ್ಸ್‌ ಖುಷಿಪಡುತ್ತಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್‌ಕುಮಾರ್ ನಾಯಕನಾಗಿ, ಸಂಪದ ಹಾಗೂ ಸಂಜನಾ ಆನಂದ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ಒದಗಿಸಿದ್ದಾರೆ.

ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸ್ಟುಡಿಯೋಸ್, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಜೂನ್-6 ರಂದು ಎಕ್ಕ ಸಿನಿಮಾ ತೆರೆಗೆ ಎಂಟ್ರಿ ಕೊಡುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page