ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ವಾಷಿಂಗ್ಟನ್ ಸುಂದರ್ ಹೊರಗೆ

ಪಿಟಿಐ: ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ವಾಷಿಂಗ್ಟನ್ ಸುಂದರ್ ಬದಲಿಗೆ ಶಹಬಾಜ್ ಅಹ್ಮದ್ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ವಾಷಿಂಗ್ಟನ್ ಸುಂದರ್ ಅವರು ಇಂಗ್ಲೆಂಡ್‌ನಲ್ಲಿ ಕೌಂಟಿ ಪಂದ್ಯ ಆಡುವಾಗ ಭುಜಕ್ಕೆ ಗಾಯ ಮಾಡಿಕೊಂಡಿದ್ದರು ಹೀಗಾಗಿ ಅವರನ್ನು ಜಿಂಬಾಬ್ವೆ ಪ್ರವಾಸದಿಂದ ಹೊರಗಿಡಲಾಗಿದ್ದು, ಈ ಸ್ಥಾನಕ್ಕೆ ಆಲ್‌ರೌಂಡರ್ ಆಟಗಾರನಾದ ಶಹಬಾಜ್ ಅಹ್ಮದ್ ಅವರಿಗೆ ತಂಡದಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. 

Related Articles

ಇತ್ತೀಚಿನ ಸುದ್ದಿಗಳು